ಬೆಂಗಳೂರು: ಸಂದರ್ಶನ ಪಡೆದ ಕಂಪನಿ ಹೆಸರಿನಲ್ಲಿ ₹ 5.03 ಲಕ್ಷ ವಂಚನೆ
ಬೆಂಗಳೂರು: ಸಂದರ್ಶನ ನೀಡಿದ್ದ ಕಂಪನಿ ಹೆಸರಿನಲ್ಲಿ ಅಭ್ಯರ್ಥಿಯನ್ನು ಸಂಪರ್ಕಿಸಿದ್ದ ಆನ್‌ಲೈನ್ ವಂಚಕರು, ಕೆಲಸ ಕೊಡಿಸುವ ಆಮಿಷವೊಡ್ಡಿ ₹ 5.03 ಲಕ್ಷ ಪಡೆದು ವಂಚಿಸಿದ್ದಾರೆ.
ವೈಟ್‌ಫೀಲ್ಡ್ ನಿವಾಸಿಯಾಗಿರುವ 21 ವರ್ಷದ ಯುವಕ ವಂಚನೆ ಬಗ್ಗೆ ಸೈಬರ್ ಕ್ರೈಂ ಠಾಣೆಗೆ ದೂರು ನೀಡಿದ್ದಾರೆ. ಆರೋಪಿ ಶ್ರವಣ್‌ಕುಮಾರ್ ಎಂಬಾತನ ವಿರುದ್ಧ ಪ್ರಕರಣ ದಾಖಲಾಗಿದೆ.
‘ದೂರುದಾರ ಕೆಲಸಕ್ಕಾಗಿ ಹುಡುಕಾಟ ನಡೆಸುತ್ತಿದ್ದರು. ಫೆಬ್ರುವರಿ 21ರಂದು ಮಾರತ್ತಹಳ್ಳಿಯಲ್ಲಿರುವ ಕಂಪನಿಯೊಂದರ ಸಂದರ್ಶನಕ್ಕೆ ಹಾಜರಾಗಿದ್ದರು. ಆದರೆ, ಅವರು ಸಂದರ್ಶನದಲ್ಲಿ ಅನುತ್ತೀರ್ಣರಾಗಿದ್ದರು’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
‘ಅದೇ ಕಂಪನಿ ಹೆಸರಿನಲ್ಲೇ ದೂರುದಾರರನ್ನು ಸಂಪರ್ಕಿಸಿದ್ದ ಆರೋಪಿ ಶ್ರವಣ್‌ಕುಮಾರ್, ಕೆಲ ಶುಲ್ಕಗಳನ್ನು ಹಾಗೂ ಕಮಿಷನರ್ ಕೊಟ್ಟರೆ ಕೆಲಸ ಕೊಡಿಸುವುದಾಗಿ ಆಮಿಷವೊಡ್ಡಿದ್ದ. ಅದನ್ನು ನಂಬಿದ್ದ ದೂರುದಾರ, ಹಂತ ಹಂತವಾಗಿ ₹ 5.03 ಲಕ್ಷ ನೀಡಿದ್ದರು. ಅದಾದ ನಂತರ ಆರೋಪಿ ನಾಪತ್ತೆಯಾಗಿದ್ದಾನೆ’ ಎಂದೂ ಮೂಲಗಳು ತಿಳಿಸಿವೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.