ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಂದರ್ಶನಕ್ಕೆ ಕರೆದು ₹ 6.18 ಲಕ್ಷ ಸುಲಿಗೆ: ನಾಲ್ವರು ಬಂಧನ

Last Updated 4 ಫೆಬ್ರುವರಿ 2023, 0:19 IST
ಅಕ್ಷರ ಗಾತ್ರ

ಬೆಂಗಳೂರು: ಸಾಫ್ಟ್‌ವೇರ್‌ ಕಂಪನಿ ಹೆಸರಿನಲ್ಲಿ ಸಂದರ್ಶನಕ್ಕೆ ಕರೆದು ಅಭ್ಯರ್ಥಿಯೊಬ್ಬರನ್ನು ಸುಲಿಗೆ ಮಾಡಲಾಗಿದ್ದು, ಈ ಸಂಬಂಧ ನಾಲ್ವರು ಆರೋಪಿಗಳನ್ನು ಕೊಡಿಗೇಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

‘ಆಂಧ್ರಪ್ರದೇಶದ ಮಲ್ಲ ಶಿವಶಂಕರ್ ರೆಡ್ಡಿ ಅಲಿಯಾಸ್ ಗೋಪಿಚಂದ್ (26), ಗುಂಜ ಮಂಗರಾವ್ (35), ಶೇಖ್ ಶಹಬಾಷಿ (30) ಹಾಗೂ ಮಹೇಶ್ (21) ಬಂಧಿತರು. ಇವರ ಬ್ಯಾಂಕ್ ಖಾತೆಯಲ್ಲಿದ್ದ ₹ 5.95 ಲಕ್ಷ ಹಣವನ್ನು ಜಪ್ತಿ ಮಾಡಲಾಗಿದೆ’ ಎಂದು ಪೊಲೀಸರು ಹೇಳಿದರು.

‘ಖಾಸಗಿ ಕಂಪನಿ ಉದ್ಯೋಗಿಗಳಾದ ಆರೋಪಿಗಳು, ಪ್ರತಿಷ್ಠಿತ ಕಂಪನಿಗಳಲ್ಲಿ ಕೆಲಸ ಇರುವುದಾಗಿ ಸಾಮಾಜಿಕ ಮಾಧ್ಯಮಗಳಲ್ಲಿ ಜಾಹೀರಾತು ನೀಡುತ್ತಿದ್ದರು. ಆರೋಪಿ ಮಲ್ಲು ಶಿವಶಂಕರ್ ರೆಡ್ಡಿ, ಗೋಪಿಚಂದ್ ಹೆಸರಿನಲ್ಲಿ ಫೇಸ್‌ಬುಕ್‌ನಲ್ಲಿ ಖಾತೆ ತೆರೆದಿದ್ದ. ಅದೇ ಖಾತೆ ಮೂಲಕ ದೂರುದಾರ ಪ್ರದೀಪ್ ಅವರನ್ನು ಪರಿಷಯ ಮಾಡಿಕೊಂಡಿದ್ದ’ ಎಂದು ತಿಳಿಸಿದರು.

‘ಸಿಎಸ್‌ಎಸ್ ಗ್ರೂಪ್‌ ಕಂಪನಿಯಲ್ಲಿ ಹುದ್ದೆಗಳು ಖಾಲಿ ಇವೆ. ಜ. 11ರಂದು ಬೆಳಿಗ್ಗೆ ಸಂದರ್ಶನಕ್ಕೆ ಬನ್ನಿ’ ಆರೋಪಿಗಳು ಸಂದೇಶ ಕಳುಹಿಸಿದ್ದರು. ಅದನ್ನು ನಂಬಿದ್ದ ಪ್ರದೀಪ್, ನಿಗದಿತ ದಿನದಂದು ಬೆಂಗಳೂರಿಗೆ ಬಂದಿದ್ದರು. ಅವರನ್ನು ಕಾರಿನಲ್ಲಿ ಹತ್ತಿಸಿಕೊಂಡು ನಗರದಲ್ಲಿ ಸುತ್ತಾಡಿಸಿದ್ದ ಆರೋಪಿಗಳು, ಜೀವ ಬೆದರಿಕೆಯೊಡ್ಡಿ ₹ 6.18 ಲಕ್ಷ ಸುಲಿಗೆ ಮಾಡಿದ್ದರು. ಬಳಿಕ, ದೂರುದಾರರನ್ನು ಬಿಟ್ಟು ಪರಾರಿಯಾಗಿದ್ದರು’ ಎಂದು ಹೇಳಿದರು.

‘ಅಪಹರಣ ಹಾಗೂ ಸುಲಿಗೆ ಸಂಬಂಧ ಪ್ರದೀಪ್ ದೂರು ನೀಡಿದ್ದರು. ತನಿಖೆ ಕೈಗೊಂಡು ಆರೋಪಿಗಳನ್ನು ಬಂಧಿಸಲಾಗಿದೆ. ಸುಲಿಗೆ ಮಾಡಿದ್ದ ಹಣದಲ್ಲಿ ಸ್ವಲ್ಪ ಹಣವನ್ನು ಆರೋಪಿಗಳು ಖರ್ಚು ಮಾಡಿದ್ದಾರೆ’ ಎಂದು ಪೊಲೀಸರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT