ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಫ್ತು: ರಾಜ್ಯದ ಕೊಡುಗೆ ಹೆಚ್ಚು

Last Updated 15 ನವೆಂಬರ್ 2019, 23:32 IST
ಅಕ್ಷರ ಗಾತ್ರ

ಬೆಂಗಳೂರು: ‘ಇಡೀ ದೇಶದ ರಫ್ತು ಚಟುವಟಿಕೆಯಲ್ಲಿ ಕರ್ನಾಟಕ ಮೂರನೇ ಒಂದರಷ್ಟು ಕೊಡುಗೆ ನೀಡುತ್ತಿದ್ದು, ಬೆಂಗಳೂರು ನಗರ ಎಲ್ಲಾ ಕ್ಷೇತ್ರಗಳಲ್ಲಿ ಮಂಚೂಣಿಯಲ್ಲಿದೆ’ ಎಂದು ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಗೌರವ್ ಗುಪ್ತ ಹೇಳಿದರು.

ನಗರದಲ್ಲಿ ಶುಕ್ರವಾರ 35ನೇ ಇನ್ವೆಸ್ಟ್ ಇಂಟರ್ ನ್ಯಾಷನಲ್ ಮತ್ತು 8ನೇ ಏಷ್ಯನ್ ವ್ಯಾಲ್ಯೂ ಎಂಜಿನಿಯರಿಂಗ್ ಸಮ್ಮೇಳನದಲ್ಲಿ ಮಾತನಾಡಿದ ಅವರು, ‘ದೇಶದಿಂದ ಒಟ್ಟಾರೆ 340 ಶತಕೋಟಿ ಡಾಲರ್ ಮೊತ್ತದಷ್ಟು ಉತ್ಪನ್ನಗಳನ್ನು ರಪ್ತು ಮಾಡಲಾಗುತ್ತಿದೆ’ ಎಂದರು.

‘ರಾಜ್ಯದಿಂದಲೇ ನೂರು ಶತಕೋಟಿ ಡಾಲರ್‌ಗೂ ಹೆಚ್ಚು ಮೊತ್ತದ ಉತ್ಪನ್ನಗಳನ್ನು ರಫ್ತು ಮಾಡುತ್ತಿರುವುದು ವಿಶೇಷ. ಇದರಲ್ಲಿ ಮಾಹಿತಿ ತಂತ್ರಜ್ಞಾನದ ಕೊಡುಗೆಯೂ ಗಣನೀಯವಾಗಿದೆ. ಮೈಸೂರು, ಹುಬ್ಬಳ್ಳಿಯಂತಹ ಎರಡನೇ ಹಂತದ ನಗರಗಳೂ ಉತ್ತಮ ಬೆಳವಣಿಗೆ ಸಾಧಿಸುತ್ತಿವೆ. ಅಲ್ಲಿಯೂ ಹೂಡಿಕೆಗೆ ಪ್ರಶಸ್ತವಾದ ವಾತಾವರಣವಿದೆ’ ಎಂದರು.

‘ಕ್ರಿಯಾಶೀಲತೆಗೆ ಒತ್ತು ನೀಡುವ ಉದ್ದೇಶದಿಂದ ಈ ಸಮ್ಮೇಳನ ನಡೆಸಲಾಗುತ್ತಿದೆ’ ಎಂದು ವ್ಯಾಲ್ಯೂ ಎಂಜಿನಿಯರಿಂಗ್ ವಲಯದ ಅಧ್ಯಕ್ಷ ನವೀನ್ ಕುಮಾರ್ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT