ಭಾನುವಾರ, 25 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಬಿಎಂಪಿ ಬಜೆಟ್‌: ಸಲಹೆಗೆ ಆಹ್ವಾನ

Published 22 ಜನವರಿ 2024, 16:09 IST
Last Updated 22 ಜನವರಿ 2024, 16:09 IST
ಅಕ್ಷರ ಗಾತ್ರ

ಬೆಂಗಳೂರು: ಬಿಬಿಎಂಪಿಯ 2024–25ನೇ ಸಾಲಿನ ಆಯವ್ಯಯಕ್ಕೆ ನಾಗರಿಕರಿಂದ ಸಲಹೆಗಳನ್ನು ಆಹ್ವಾನಿಸಲಾಗಿದೆ.

ಬಜೆಟ್‌ ಸಿದ್ಧತೆ ಕಾರ್ಯ ಪ್ರಗತಿಯಲ್ಲಿದ್ದು, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನಿರ್ದೇಶನದಂತೆ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘಗಳು, ನಾಗರಿಕ ಸಂಘ-ಸಂಸ್ಥೆಗಳು ಹಾಗೂ ಸಾರ್ವಜನಿಕರಿಂದ ಸಲಹೆಗಳನ್ನು ಆಹ್ವಾನಿಸಲಾಗಿದೆ.

ಬಿಬಿಎಂಪಿ ಕೇಂದ್ರ ಕಚೇರಿಯ ಮುಖ್ಯದ್ವಾರದ ಬಳಿ ಸಲಹಾ ಪೆಟ್ಟಿಗೆ ಇರಿಸಿದ್ದು, ಅಲ್ಲಿಗೆ ಸಲಹಾ ಪತ್ರಗಳನ್ನು ಹಾಕಬಹುದು ಎಂದು ಹಣಕಾಸು ವಿಭಾಗದ ವಿಶೇಷ ಆಯುಕ್ತ ಶಿವಾನಂದ್ ಕಲ್ಕೆರೆ ತಿಳಿಸಿದ್ದಾರೆ.

ಇ-ಮೇಲ್‌ bbmpbudget@gmail.com, suggestions2bbmpbudget@gmail.com ಗಳಿಗೆ ಸಲಹೆ, ಸೂಚನೆಗಳನ್ನು ಫೆಬ್ರುವರಿ 10ರೊಳಗೆ ಕಳುಹಿಸಬಹುದು ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT