ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಲಹೆಗೆ ಆಹ್ವಾನ

Published 14 ಆಗಸ್ಟ್ 2023, 23:30 IST
Last Updated 14 ಆಗಸ್ಟ್ 2023, 23:30 IST
ಅಕ್ಷರ ಗಾತ್ರ

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತಿನಿಂದ ಮಂಡ್ಯದಲ್ಲಿ ಹಮ್ಮಿಕೊಳ್ಳಲಾಗುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಂಬಂಧಿಸಿದಂತೆ ಸಲಹೆ, ಸೂಚನೆ ನೀಡಲು ಸಾರ್ವಜನಿಕರಿಗೆ ಅವಕಾಶ ಕಲ್ಪಿಸಲಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮಹೇಶ ಜೋಶಿ ತಿಳಿಸಿದ್ದಾರೆ.

ಈ ಸಮ್ಮೇಳನದ ಸ್ವರೂಪ ಹೇಗಿರಬೇಕು? ಎಷ್ಟು ಗೋಷ್ಠಿಗಳು, ಯಾವ ಯಾವ ವಿಷಯದ ಬಗ್ಗೆ ಇರಬೇಕು? ಯಾವ ಮಾದರಿಯ ಪುಸ್ತಕಗಳು ಪ್ರಕಟವಾಗಬೇಕು? ಸನ್ಮಾನಕ್ಕೆ ಅರ್ಹರು ಯಾರು? ಸಾಂಸ್ಕೃತಿಕ ಕಾರ್ಯಕ್ರಮಗಳ ಸ್ವರೂಪ ಹೇಗಿರಬೇಕು? ಮೊದಲಾದ ವಿಷಯಗಳ ಕುರಿತು ಸಾರ್ವಜನಿಕರು ಅಭಿಪ್ರಾಯಗಳನ್ನು ನೀಡಬಹುದು. ಸಲಹೆ ನೀಡುವವರು ಪೂರ್ಣ ಹೆಸರು, ವಿಳಾಸ, ಮೊಬೈಲ್ ಸಂಖ್ಯೆ ಮತ್ತು ಇ–ಮೇಲ್ ವಿಳಾಸವನ್ನು ತಿಳಿಸಬೇಕು. ಸೆ.30ರ ಒಳಗೆ ‘ಅಧ್ಯಕ್ಷರು, ಕನ್ನಡ ಸಾಹಿತ್ಯ ಪರಿಷತ್ತು, ಪಂಪಮಹಾಕವಿ ರಸ್ತೆ, ಚಾಮರಾಜಪೇಟೆ, ಬೆಂಗಳೂರು 560018’ ಇಲ್ಲಿಗೆ ಕಳುಹಿಸಲು ಕೋರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT