ಕ್ರಿಕೆಟ್ ಬೆಟ್ಟಿಂಗ್: ಆರೋಪಿಗಳ ಬಂಧನ

ಬೆಂಗಳೂರು: ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ನಲ್ಲಿ ತೊಡಗಿದ್ದ ಆರೋಪಿಯನ್ನು ಬಂಧಿಸಿರುವ ಸಿಸಿಬಿ ವಿಶೇಷ ವಿಚಾರಣಾ ದಳದ ಅಧಿಕಾರಿಗಳು, ₹2.20 ಲಕ್ಷ ನಗದು ಹಾಗೂ ಮೊಬೈಲ್ ಜಪ್ತಿ ಮಾಡಿದ್ದಾರೆ.
‘ಆರೋಪಿಯು ಇದೇ 22 ರಂದು ನಡೆದಿದ್ದ ಸನ್‌ರೈಸರ್ಸ್ ಹೈದರಾಬಾದ್ ಹಾಗೂ ಕಿಂಗ್ಸ್ ಇಲೆವನ್ ಪಂಜಾಬ್ ನಡುವಣ ಪಂದ್ಯದ ಸೋಲು ಗೆಲುವಿನ ಕುರಿತು ಹಣ ಕಟ್ಟಿಸಿಕೊಂಡಿದ್ದ. ಸೋತ ಬೆಟ್ಟರ್‌ಗಳಿಂದ ಹಣ ಸಂಗ್ರಹಿಸಿ ಅದನ್ನು ಗೆದ್ದವರಿಗೆ ನೀಡಲು ಮುಂದಾಗಿದ್ದ. ಈ ವೇಳೆ ಆತನನ್ನು ಅಶೋಕನಗರ ಪೊಲೀಸ್ ಠಾಣೆ ವ್ಯಾಪ್ತಿಯ ಮೆಗ್ರಾತ್ ರಸ್ತೆಯ ಬಾರ್ ಬಳಿ ಬಂಧಿಸಲಾಗಿದೆ. ಪ್ರಕರಣ ದಾಖಲಿಸಲಾಗಿದೆ’ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಮತ್ತೊಂದು ಪ್ರತ್ಯೇಕ ಪ್ರಕರಣ: ಮತ್ತೊಂದು ಪ್ರಕರಣದಲ್ಲಿ ಐಪಿಎಲ್ ಬೆಟ್ಟಿಂಗ್‌ನಲ್ಲಿ ತೊಡಗಿದ್ದ ವ್ಯಕ್ತಿಯನ್ನು ಬಂಧಿಸಿರುವ ಚಂದ್ರಾ ಲೇಔಟ್ ಠಾಣೆ ಪೊಲೀಸರು ₹29,800 ನಗದು ಹಾಗೂ ಮೊಬೈಲ್ ಜಪ್ತಿ ಮಾಡಿದ್ದಾರೆ.
ಗೋವಿಂದರಾಜನಗರ ನಿವಾಸಿ ಸುನಿಲ್ (33) ಬಂಧಿತ. ಕ್ರಿಕೆಟ್ ಗುರು ಲೈನ್ ಆ್ಯಪ್‌ನಿಂದ ಬೆಟ್ಟಿಂಗ್ ನಡೆಸುತ್ತಿದ್ದ ವೇಳೆ ಬಂಧನಕ್ಕೊಳಗಾಗಿದ್ದಾನೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.