ಬೆಂಗಳೂರು: ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ‘ಆರ್‌ಸಿಬಿ ಅನ್‌ಬಾಕ್ಸ್ ಕಾರ್ಯಕ್ರಮ’ ಮತ್ತು ಮೂರು ಐಪಿಎಲ್ ಪಂದ್ಯಗಳು ನಡೆಯುವ ದಿನಗಳಲ್ಲಿ ಪ್ರಯಾಣಿಕರ ಅನುಕೂಲಕ್ಕೆ ಹೆಚ್ಚುವರಿ ಬಸ್‌ಗಳ ವ್ಯವಸ್ಥೆ ಮಾಡಲು ಬಿಎಂಟಿಸಿ ನಿರ್ಧರಿಸಿದೆ.

ಮಾರ್ಚ್ 19ರಂದು ‘ಆರ್‌ಸಿಬಿ ಅನ್‌ಬಾಕ್ಸ್ ಕಾರ್ಯಕ್ರಮ’ ನಡೆಯಲಿದೆ. ಮಾರ್ಚ್ 25, 29 ಮತ್ತು ಏಪ್ರಿಲ್ 2ರಂದು ಐಪಿಎಲ್ ಕ್ರಿಕೆಟ್ ಪಂದ್ಯ ಆಯೋಜಿಸಲಾಗಿದೆ.

ಎಂ. ಚಿನ್ನಸ್ವಾಮಿ ಕ್ರೀಡಾಂಗಣದಿಂದ ಎಚ್‌ಎಎಲ್ ರಸ್ತೆ ಮೂಲಕ ಕಾಡುಗೋಡಿ ಬಸ್ ನಿಲ್ದಾಣಕ್ಕೆ, ಹೂಡಿ ರಸ್ತೆ ಮೂಲಕ ಕಾಡುಗೋಡಿ ಬಸ್ ನಿಲ್ದಾಣಕ್ಕೆ, ಹೊಸೂರು ರಸ್ತೆ ಮೂಲಕ ಎಲೆಕ್ಟ್ರಾನಿಕ್ ಸಿಟಿಗೆ, ಎಂಟಿಸಿಟಿ–ನಾಯಂಡಹಳ್ಳಿ ಮೂಲಕ ಕೆಂಗೇರಿ ಕೆಎಚ್‌ಬಿ ಕ್ವಾರ್ಟರ್ಸ್‌ಗೆ, ಮಾಗಡಿ ರಸ್ತೆ ಮೂಲಕ ಜನಪ್ರಿಯ ಟೌನ್‌ಶಿಪ್‌ಗೆ, ನಾಗವಾರ–ಟ್ಯಾನರಿ ರಸ್ತೆ ಮೂಲಕ ಆರ್.ಕೆ. ಹೆಗಡೆ ನಗರಕ್ಕೆ, ಹೆಣ್ಣೂರು ರಸ್ತೆ ಮೂಲಕ ಬಾಗಲೂರಿಗೆ ಹೆಚ್ಚುವರಿ ಬಸ್‌ಗಳು ಸಂಚರಿಸಲಿವೆ.

ಸರ್ಜಾಪುರ, ಬನ್ನೇರುಘಟ್ಟ ಮೃಗಾಲಯ, ನೆಲಮಂಗಲ, ಯಲಹಂಕ 5ನೇ ಹಂತ, ಹೊಸಕೋಟೆಗಳಿಗೂ ಹೆಚ್ಚುವರಿ ಬಸ್ ವ್ಯವಸ್ಥೆ ಇರಲಿದೆ ಎಂದು ಬಿಎಂಟಿಸಿ ಸಾರ್ವಜನಿಕ ಅಧಿಕಾರಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.