ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಐಪಿಎಲ್‌: ಬಿಎಂಟಿಸಿಯಿಂದ ಹೆಚ್ಚುವರಿ ಬಸ್‌ ವ್ಯವಸ್ಥೆ

Published 13 ಏಪ್ರಿಲ್ 2024, 14:42 IST
Last Updated 13 ಏಪ್ರಿಲ್ 2024, 14:42 IST
ಅಕ್ಷರ ಗಾತ್ರ

ಬೆಂಗಳೂರು: ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್‌ ಪಂದ್ಯಗಳು ನಡೆಯುವ ದಿನಗಳಲ್ಲಿ ಪ್ರಯಾಣಿಕರ ಅನುಕೂಲಕ್ಕೆ ಹೆಚ್ಚುವರಿ ಬಸ್‌ಗಳ ವ್ಯವಸ್ಥೆ ಮಾಡಲು ಬಿಎಂಟಿಸಿ ನಿರ್ಧರಿಸಿದೆ.

ಏಪ್ರಿಲ್‌ 15, ಮೇ 4, 12 ಮತ್ತು ಮೇ 18ರಂದು ಐಪಿಎಲ್ ಕ್ರಿಕೆಟ್‌ ಪಂದ್ಯಗಳು ನಡೆಯಲಿದೆ. ಈ ದಿನಗಳಲ್ಲಿ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಿಂದ ಎಚ್‌ಎಎಲ್ ರಸ್ತೆ ಮೂಲಕ ಕಾಡುಗೋಡಿ ಬಸ್‌ ನಿಲ್ದಾಣಕ್ಕೆ, ಹೂಡಿ ರಸ್ತೆ ಮೂಲಕ ಕಾಡುಗೋಡಿ ಬಸ್‌ ನಿಲ್ದಾಣಕ್ಕೆ, ಹೊಸೂರು ರಸ್ತೆ ಮೂಲಕ ಎಲೆಕ್ಟ್ರಾನಿಕ್‌ ಸಿಟಿಗೆ, ನಾಗವಾರ–ಟ್ಯಾನರಿ ರಸ್ತೆ ಮೂಲಕ ಆರ್‌.ಕೆ. ಹೆಗಡೆ ನಗರಕ್ಕೆ, ಮಾಗಡಿ ರಸ್ತೆ ಮೂಲಕ ಜನಪ್ರಿಯ ಟೌನ್‌ಶಿಪ್‌ಗೆ, ಎಂಟಿಸಿಟಿ–ನಾಯಂಡಹಳ್ಳಿ ಮೂಲಕ ಕೆಂಗೇರಿ ಕೆಎಚ್‌ಬಿ ಕ್ವಾರ್ಟರ್ಸ್‌ಗೆ,  ಹೆಣ್ಣೂರು ರಸ್ತೆ ಮೂಲಕ ಬಾಗಲೂರಿಗೆ ಹೆಚ್ಚುವರಿ ಬಸ್‌ಗಳು ಸಂಚರಿಸಲಿವೆ.

ಸರ್ಜಾಪುರ, ಬನ್ನೇರುಘಟ್ಟ ಮೃಗಾಲಯ, ನೆಲಮಂಗಲ, ಯಲಹಂಕ 5ನೇ ಹಂತ, ಹೊಸಕೋಟೆಗಳಿಗೂ ಹೆಚ್ಚುವರಿ ಬಸ್‌ ವ್ಯವಸ್ಥೆ ಇರಲಿದೆ ಎಂದು ಬಿಎಂಟಿಸಿ ಸಾರ್ವಜನಿಕ ಅಧಿಕಾರಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT