ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು: ಐಪಿಎಲ್ ಬೆಟ್ಟಿಂಗ್; ₹ 4 ಲಕ್ಷ ಸಮೇತ ಆರೋಪಿ ಬಂಧನ

Last Updated 11 ಅಕ್ಟೋಬರ್ 2021, 16:50 IST
ಅಕ್ಷರ ಗಾತ್ರ

ಬೆಂಗಳೂರು: ಐಪಿಎಲ್ ಪಂದ್ಯಗಳ ಮೇಲೆ ಬೆಟ್ಟಿಂಗ್ ನಡೆಸುತ್ತಿದ್ದ ಆರೋಪಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದು, ಆತನಿಂದ ₹ 4 ಲಕ್ಷ ನಗದು ಜಪ್ತಿ ಮಾಡಿದ್ದಾರೆ.

‘ಕಾಮಾಕ್ಷಿಪಾಳ್ಯ ಠಾಣೆ ವ್ಯಾಪ್ತಿಯ ಪಟ್ಟೇಗಾರಪಾಳ್ಯದ ಬಿಡಿಎ ಬಡಾವಣೆಯ ಹೋಟೆಲೊಂದರ ಬಳಿ ಅ. 9ರಂದು ಆರೋಪಿ ಕಾಣಿಸಿಕೊಂಡಿದ್ದ. ಪಂದ್ಯಗಳ ಸೋಲು ಹಾಗೂ ಗೆಲುವು ಲೆಕ್ಕಾಚಾರದಲ್ಲಿ ಜನರಿಂದ ಹಣ ಕಟ್ಟಿಸಿಕೊಳ್ಳುತ್ತಿದ್ದ. ಈ ಬಗ್ಗೆ ಮಾಹಿತಿ ಬರುತ್ತಿದ್ದಂತೆ ದಾಳಿ ಮಾಡಿ ಆತನನ್ನು ಬಂಧಿಸಲಾಗಿದೆ’ ಎಂದು ಸಿಸಿಬಿ ಪೊಲೀಸರು ಹೇಳಿದರು.

‘ಆ್ಯಪ್ ಹಾಗೂ ಜಾಲತಾಣಗಳ ಮೂಲಕ ಪಂದ್ಯಗಳ ಸರಾಸರಿ ನೋಡಿಕೊಂಡು ಆರೋಪಿ ಬೆಟ್ಟಿಂಗ್ ದಂಧೆ ನಡೆಸುತ್ತಿದ್ದ. ರಾಯಲ್ ಚಾಲೆಂಜರ್ಸ್ ಹಾಗೂ ದೆಹಲಿ ಕ್ಯಾಪಿಟಲ್ಸ್, ಮುಂಬೈ ಇಂಡಿಯನ್ಸ್ ಹಾಗೂ ಸನ್‌ ರೈಸರ್ಸ್ ಹೈದರಾಬಾದ್ ತಂಡಗಳ ನಡುವಿನ ಪಂದ್ಯಗಳ ಮೇಲೆ ಬೆಟ್ಟಿಂಗ್ ನಡೆಸಿರುವುದು ತನಿಖೆಯಿಂದ ಗೊತ್ತಾಗಿದೆ’ ಎಂದೂ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT