ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಐಪಿಎಲ್‌ ಮೇಲೆ ಬೆಟ್ಟಿಂಗ್: ₹ 4 ಲಕ್ಷ ಜಪ್ತಿ

Last Updated 7 ಮೇ 2022, 16:17 IST
ಅಕ್ಷರ ಗಾತ್ರ

ಬೆಂಗಳೂರು: ಐಪಿಎಲ್ ಕ್ರಿಕೆಟ್ ಪಂದ್ಯಗಳ ಮೇಲೆ ಬೆಟ್ಟಿಂಗ್ ನಡೆಸುತ್ತಿದ್ದ ಆರೋಪದಡಿ ವಿಶಾಲ್ ರಾಜ್ ಎಂಬಾತನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

‘ಗುಜರಾತ್ ಟೈಟಾನ್ಸ್ ಮತ್ತು ಮುಂಬೈ ಇಂಡಿಯನ್ಸ್ ತಂಡಗಳ ನಡುವಿನ ಪಂದ್ಯಗಳ ಮೇಲೆ ಬೆಟ್ಟಿಂಗ್ ನಡೆಸುತ್ತಿದ್ದ ಬಗ್ಗೆ ಮಾಹಿತಿ ಬಂದಿತ್ತು. ಹಲಸೂರು ಠಾಣೆ ವ್ಯಾಪ್ತಿಯ ದೊಮ್ಮಲೂರು ಬಡಾವಣೆಯಲ್ಲಿ ಕಾರ್ಯಾಚರಣೆ ನಡೆಸಿ ಆರೋಪಿ ವಿಶಾಲ್‌ ರಾಜ್‌ನನ್ನು ಬಂಧಿಸಲಾಗಿದೆ. ಆತನಿಂದ ₹ 4 ಲಕ್ಷ ನಗದು ಜಪ್ತಿ ಮಾಡಲಾಗಿದೆ’ ಎಂದು ಪೊಲೀಸರು ಹೇಳಿದರು.

‘ಐಪಿಎಲ್ ಪಂದ್ಯಾವಳಿ ಆರಂಭವಾದ ದಿನದಿಂದಲೂ ಸೋಲು– ಗೆಲುವಿನ ಲೆಕ್ಕಾಚಾರದಲ್ಲಿ ಆರೋಪಿ ಬೆಟ್ಟಿಂಗ್ ನಡೆಸುತ್ತಿದ್ದ ಮಾಹಿತಿ ಇದೆ. ಇದಕ್ಕಾಗಿ ಆ್ಯಪ್ ಬಳಸುತ್ತಿದ್ದ’ ಎಂದೂ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT