ಬೆಂಗಳೂರು: ಐಪಿಎಲ್ ಪಂದ್ಯಗಳ ಬೆಟ್ಟಿಂಗ್ ಸೋಗಿನಲ್ಲಿ ವಂಚನೆ ಕೃತ್ಯಗಳು ಹೆಚ್ಚಾಗಿದ್ದು, ಈ ಬಗ್ಗೆ ಎಚ್ಚರದಿಂದ ಇರುವಂತೆ ನಗರ ಪೊಲೀಸ್ ಕಮಿಷನರ್ ಬಿ.ದಯಾನಂದ ಅವರು ಸಾರ್ವಜನಿಕರಿಗೆ ಕಿವಿಮಾತು ಹೇಳಿದ್ದಾರೆ.

ಐಪಿಎಲ್ ಪಂದ್ಯಗಳ ಸೋಗಿನಲ್ಲಿ ಬುಕ್ಕಿಗಳು ಬೆಟ್ಟಿಂಗ್ ದಂಧೆಯಲ್ಲಿ ನಿರತರಾಗಿದ್ದಾರೆ. ಆನ್ಲೈನ್ ಮೂಲಕ ಲಿಂಕ್ಗಳನ್ನು ಕಳುಹಿಸಿ ಪ್ರಚೋದನೆ ನೀಡುವ ಕೆಲಸ ಮಾಡುತ್ತಿದ್ದಾರೆ. ಕಾನೂನುಬಾಹಿರ ಆ್ಯಪ್ ಕಂಪನಿಗಳು ಬೆಟ್ಟಿಂಗ್ನಲ್ಲಿ ಗೆದ್ದರೆ ಹೆಚ್ಚು ಹಣ ಗಳಿಸುವ ಆಮಿಷವೊಡ್ಡಿ ವಂಚನೆ ಕೃತ್ಯದಲ್ಲಿ ಭಾಗಿಯಾಗುತ್ತಿವೆ ಎಂದು ತಿಳಿಸಿದ್ದಾರೆ.

ಬೆಟ್ಟಿಂಗ್ ಪ್ರೋತ್ಸಾಹಿಸುವ ವಾಟ್ಸ್ಆ್ಯಪ್ ಗ್ರೂಪ್ಗಳಿಗೆ ಸದಸ್ಯರಾಗದಿರಿ. ಅಪರಿಚಿತ ವ್ಯಕ್ತಿಗಳಿಗೆ ವೈಯಕ್ತಿಕ ವಿವರ ನೀಡಬಾರದು. ಆನ್ಲೈನ್ ಬೆಟ್ಟಿಂಗ್ ಕಾನೂನುಬಾಹಿರ ಹಾಗೂ ಅಪಾಯಕಾರಿ. ವಂಚನೆಯ ಬಲೆಯಲ್ಲಿ ಸಿಲುಕಬೇಡಿ. 1930ಕ್ಕೆ ಕರೆ ಮಾಡಿ ಬೆಟ್ಟಿಂಗ್ ಬಗ್ಗೆ ಮಾಹಿತಿ ನೀಡಬೇಕು ಎಂದು ನಗರ ಪೊಲೀಸ್ ಇಲಾಖೆ ಜಾಲತಾಣದಲ್ಲಿ ಮನವಿ ಮಾಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.