ಬೆಂಗಳೂರು: ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಟಾಟಾ ಐಪಿಎಲ್ ಕ್ರಿಕೆಟ್ ಅಭ್ಯಾಸ ಪಂದ್ಯ ನಡೆಯಲಿದ್ದು, ಸುಗಮ ಸಂಚಾರಕ್ಕೆ ಅನುಕೂಲ ಕಲ್ಪಿಸುವುದಕ್ಕಾಗಿ ಮಾರ್ಚ್ 26ರಂದು ಹಲವು ರಸ್ತೆಗಳಲ್ಲಿ ಸಾರ್ವಜನಿಕರ ವಾಹನ ನಿಲುಗಡೆ
ನಿರ್ಬಂಧಿಸಲಾಗಿದೆ.
‘ಕ್ವೀನ್ಸ್ ರಸ್ತೆ, ಎಂ.ಜಿ. ರಸ್ತೆ, ರಾಜಭವನ ರಸ್ತೆ, ಸೆಂಟ್ರಲ್ ಸ್ಟ್ರೀಟ್, ಸೇಂಟ್ ಮಾರ್ಕ್ಸ್ ರಸ್ತೆ, ಮ್ಯೂಸಿಯಂ ರಸ್ತೆ, ಕಸ್ತೂರಬಾ ರಸ್ತೆ, ವಿಧಾನಸೌಧ–ಹೈಕೋರ್ಟ್ ಎದುರಿನ ರಸ್ತೆ, ಟ್ರಿನಿಟಿ ರಸ್ತೆ, ಲ್ಯಾವೆಲ್ಲೆ ರಸ್ತೆ, ವಿಠ್ಠಲ್ ಮಲ್ಯ ರಸ್ತೆ, ನೃಪತುಂಗ ರಸ್ತೆಯಲ್ಲಿ ಸಂಜೆ 4 ಗಂಟೆಯಿಂದ ರಾತ್ರಿ 10 ಗಂಟೆವರೆಗೆ ವಾಹನಗಳ ನಿಲುಗಡೆ ನಿರ್ಬಂಧಿಸಲಾಗಿದೆ’ ಎಂದು ಸಂಚಾರ ಪೊಲೀಸರು ಹೇಳಿದ್ದಾರೆ.
‘ಪಂದ್ಯ ವೀಕ್ಷಿಸಲು ಬರುವ ಜನರು ತಮ್ಮ ವಾಹನಗಳನ್ನು ಸೇಂಟ್ ಜೋಸೆಫ್ ಇಂಡಿಯಾ ಸ್ಕೂಲ್ ಮೈದಾನ್, ಯು.ಬಿ ಸಿಟಿ ಹಾಗೂ ಶಾಂತಿನಗರ ಬಿಎಂಟಿಸಿ ಬಸ್ ನಿಲ್ದಾಣದ ಪಾರ್ಕಿಂಗ್ ಜಾಗದಲ್ಲಿ ನಿಲ್ಲಿಸಬಹುದು’ ಎಂದಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.