ಬೆಂಗಳೂರು: ಇಲ್ಲಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್ಸಿಬಿ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ (ಸಿ.ಎಸ್.ಕೆ) ತಂಡಗಳ ಮಧ್ಯೆ ಮೇ 3ರಂದು (ಶನಿವಾರ) ನಡೆದ ಐಪಿಎಲ್ ಪಂದ್ಯದ ಟಿಕೆಟ್ಗಳನ್ನು ಕಾಳಸಂತೆಯಲ್ಲಿ ಅಧಿಕ ಮೊತ್ತಕ್ಕೆ ಮಾರಾಟ ಮಾಡುತ್ತಿದ್ದ ಮೂವರನ್ನು ಸಿಸಿಬಿಯ ವಿಶೇಷ ವಿಚಾರಣಾ ದಳದ ಪೊಲೀಸರು ಬಂಧಿಸಿದ್ದಾರೆ.

ಬಂಧಿತರಿಂದ 13 ಟಿಕೆಟ್ಗಳು, ಮೂರು ಮೊಬೈಲ್ ಫೋನ್ ಹಾಗೂ ₹1 ಸಾವಿರ ನಗದು ಜಪ್ತಿ ಮಾಡಲಾಗಿದೆ.

ಆರೋಪಿಗಳು ತಮ್ಮ ಬ್ಯಾಂಕ್ ಖಾತೆಗೆ ಜಮೆ ಮಾಡಿಸಿಕೊಂಡಿದ್ದ ₹36 ಸಾವಿರವನ್ನು ಪತ್ತೆಹಚ್ಚಿ ವಹಿವಾಟು ಸ್ಥಗಿತ ಮಾಡಲಾಗಿದೆ ಎಂದು ನಗರ ಪೊಲೀಸ್ ಕಮಿಷನರ್ ಬಿ.ದಯಾನಂದ ಮಾಹಿತಿ ನೀಡಿದರು.

‘ಮಧ್ಯವರ್ತಿಗಳ ಮೂಲಕ ಆರೋಪಿಗಳು ಟಿಕೆಟ್ ಪಡೆದು ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದರು. ಕಬ್ಬನ್ಪಾರ್ಕ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇರುವ ಚಿನ್ನಸ್ವಾಮಿ ಕ್ರೀಡಾಂಗಣದ ಸುತ್ತಮುತ್ತ ಆರೋಪಿಗಳು ಐಪಿಎಲ್ ಟಿಕೆಟ್ ಮಾರಾಟ ಮಾಡುತ್ತಿದ್ದರು. ಖಚಿತ ಮಾಹಿತಿ ಆಧರಿಸಿ ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಲಾಯಿತು’ ಎಂದು ಮಾಹಿತಿ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.