ಭಾನುವಾರ, 26 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಐಪಿಎಲ್‌ | ಮೇ 12ರಂದು ವಾಹನ ನಿಲುಗಡೆ ನಿರ್ಬಂಧ: ಸಂಚಾರ ಮಾರ್ಗ ಬದಲಾವಣೆ

Published 11 ಮೇ 2024, 16:26 IST
Last Updated 11 ಮೇ 2024, 16:26 IST
ಅಕ್ಷರ ಗಾತ್ರ

ಬೆಂಗಳೂರು: ಇಲ್ಲಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮೇ 12ರಂದು ‘ರಾಯಲ್‌ ಚಾಲೆಂಜರ್ಸ್ ಬೆಂಗಳೂರು’ ಹಾಗೂ ‘ದೆಹಲಿ ಕ್ಯಾಪಿಟಲ್ಸ್’ ತಂಡಗಳ ನಡುವೆ ಐಪಿಎಲ್‌ ಟೂರ್ನಿಯ ಕ್ರಿಕೆಟ್‌ ಪಂದ್ಯ ನಡೆಯಲಿದ್ದು, ಕ್ರೀಡಾಂಗಣದ ಸುತ್ತಮುತ್ತಲ ರಸ್ತೆಗಳಲ್ಲಿ ಮಧ್ಯಾಹ್ನ 3ರಿಂದ ರಾತ್ರಿ 11ರ ವರೆಗೆ ವಾಹನಗಳ ನಿಲುಗಡೆ ಹಾಗೂ ಸಂಚಾರ ಮಾರ್ಗ ಬದಲಾವಣೆ ಮಾಡಲಾಗಿದೆ.

ವಾಹನಗಳ ನಿಲುಗಡೆ ನಿರ್ಬಂಧಿತ ರಸ್ತೆಗಳು: ಕ್ವೀನ್ಸ್ ರಸ್ತೆ, ಮಹಾತ್ಮ ಗಾಂಧಿ ರಸ್ತೆ, ಎಂ.ಜಿ ರಸ್ತೆಯಿಂದ ಕಬ್ಬನ್ ರಸ್ತೆ, ರಾಜಭವನ ರಸ್ತೆ, ಸೆಂಟ್ರಲ್ ಸ್ಟ್ರೀಟ್ ರಸ್ತೆ, ಕಬ್ಬನ್‍ ರಸ್ತೆ, ಸೇಂಟ್ ಮಾರ್ಕ್ಸ್‌ ರಸ್ತೆ, ಮ್ಯೂಸಿಯಂ ರಸ್ತೆ, ಕಸ್ತೂರಿ ಬಾ ರಸ್ತೆ, ಅಂಬೇಡ್ಕರ್ ವೀದಿ ರಸ್ತೆ, ಟ್ರಿನಿಟಿ ವೃತ್ತ, ಲ್ಯಾವೆಲ್ಲೆ ರಸ್ತೆ, ವಿಠ್ಠಲ್‌ಮಲ್ಯ ರಸ್ತೆ, ಕಿಂಗ್ಸ್ ರಸ್ತೆ ಮತ್ತು ನೃಪತುಂಗ ರಸ್ತೆ.

ಸಾರ್ವಜನಿಕ ವಾಹನಗಳ ನಿಲುಗಡೆ ಸ್ಥಳಗಳು: ಸೇಂಟ್ ಜೋಸೆಫ್ ಇಂಡಿಯನ್ ಸ್ಕೂಲ್ ಮೈದಾನ, ಯುಬಿ ಸಿಟಿ ಪಾರ್ಕಿಂಗ್ ಸ್ಥಳ, ಬಿಎಂಟಿಸಿ ಬಸ್ ನಿಲ್ದಾಣದ ಮೊದಲನೇ ಮಹಡಿ ಹಾಗೂ ಓಲ್ಡ್ ಕೆಜಿಐಡಿ ಬಿಲ್ಡಿಂಗ್, ಕಿಂಗ್ಸ್ ರಸ್ತೆ, (ಕಬ್ಬನ್‍ಪಾರ್ಕ್ ಒಳಭಾಗ).

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT