ಬೆಂಗಳೂರು: ‘ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ (ಡಿಸಿಆರ್ಇ) ಡಿಜಿಪಿ ಆಗಿದ್ದ ಕೆ.ರಾಮಚಂದ್ರ ರಾವ್ ಅವರು ತಮ್ಮ ಕಚೇರಿಯಲ್ಲಿ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದರು’ ಎನ್ನಲಾದ ವಿಡಿಯೊ ಅಸಲಿ ಎಂದು ಪ್ರಕರಣದ ತನಿಖೆ ನಡೆಸಿದ ಐಪಿಎಸ್ ಅಧಿಕಾರಿಗಳ ಸಮಿತಿ ಹೇಳಿದೆ.

ರಾಮಚಂದ್ರ ರಾವ್ ಅವರಿಗೆ ಸಂಬಂಧಿಸಿದ ವಿಡಿಯೊವೊಂದು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡಿ, ಭಾರಿ ವಿವಾದ ಎಬ್ಬಿಸಿತ್ತು. ಈ ಬಗ್ಗೆ ತನಿಖೆ ನಡೆಸಲು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಆರ್.ಹಿತೇಂದ್ರ ನೇತೃತ್ವದಲ್ಲಿ ನಾಲ್ವರು ಐಪಿಎಸ್ ಅಧಿಕಾರಿಗಳನ್ನು ಒಳಗೊಂಡ ಸಮಿತಿಯನ್ನು ಸರ್ಕಾರ ರಚಿಸಿತ್ತು. ಸಮಿತಿಯು 100 ಪುಟಗಳ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿದ್ದು, ‘ವಿಡಿಯೊ ಅಸಲಿ’ ಎಂದು ವರದಿಯಲ್ಲಿ ಉಲ್ಲೇಖಿಸಿದೆ.

ವಿಡಿಯೊ ಬಹಿರಂಗವಾದ ವೇಳೆ ರಾಮಚಂದ್ರ ರಾವ್ ಅವರು ‘ಅದು ಕೃತಕ ಬುದ್ಧಿಮತ್ತೆ ತಂತ್ರಜ್ಞಾನ ಬಳಸಿ ವಿಡಿಯೊ ಸೃಷ್ಟಿಸಲಾಗಿದೆ. ತಮ್ಮ ವಿರುದ್ಧ ಷಡ್ಯಂತ್ರ ಮಾಡಲಾಗಿದೆ’ ಎಂದು ಹೇಳಿದ್ದರು.

‘ಡೀಪ್ಫೇಕ್, ಕೃತಕ ಬುದ್ಧಿಮತ್ತೆ (ಎ.ಐ) ನಿರ್ಮಿತ ಅಥವಾ ಯಾವುದೇ ರೀತಿಯಲ್ಲಿ ಎಡಿಟ್ ಆಗಿರುವ ದೃಶ್ಯಗಳು ಅಲ್ಲ ಎಂಬುದು ದೃಢ ಪಟ್ಟಿದೆ’ ಎಂದು ತನಿಖಾ ಸಮಿತಿ ವರದಿಯಲ್ಲಿ ಉಲ್ಲೇಖಿಸಿದೆ.

ಜನವರಿ 19ರಂದು ವಿಡಿಯೊ ಹರಿದಾಡಿದ ಬೆನ್ನಲ್ಲೇ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಕರಣದ ಕುರಿತು ವರದಿ ಸಲ್ಲಿಸುವಂತೆ ಆದೇಶಿಸಿದ್ದರು. ಬಳಿಕ, ರಾಮಚಂದ್ರರಾವ್ ಅವರನ್ನು ಅಮಾನತು ಮಾಡಲಾಗಿತ್ತು.

ರಾಮಚಂದ್ರರಾವ್ ಅವರು ಪೊಲೀಸ್ ಸಮವಸ್ತ್ರದಲ್ಲಿ ಕಚೇರಿಯ ಕುರ್ಚಿಯಲ್ಲಿ ಕುಳಿತು ಮಹಿಳೆಯನ್ನು ಅಪ್ಪಿಕೊಳ್ಳುತ್ತಿರುವ ಹಾಗೂ ಮುತ್ತಿಡುತ್ತಿರುವ ದೃಶ್ಯವು ವಿಡಿಯೊದಲ್ಲಿ ದಾಖಲಾಗಿತ್ತು. ಚೇಂಬರ್ನಲ್ಲಿ ಇರುವ ರಾಷ್ಟ್ರಧ್ವಜ ಹಾಗೂ ರಾಜ್ಯ ಪೊಲೀಸ್ ಧ್ವಜ ಸಹ ವಿಡಿಯೊದಲ್ಲಿ ಸೆರೆಯಾಗಿತ್ತು.

‘ವಿಡಿಯೊದಲ್ಲಿ ಯಾವುದೇ ಮಾರ್ಪಾಟು ಆಗಿಲ್ಲ’ ಎಂದು ವಿಧಿ ವಿಜ್ಞಾನ ಪ್ರಯೋಗಾಲಯದ (ಎಫ್ಎಸ್ಎಲ್) ವರದಿಯಿಂದ ದೃಢಪಟ್ಟಿದೆ. 2016–17ರ ಅವಧಿಯಲ್ಲಿ ಬೆಳಗಾವಿ ವಲಯದ ಐಜಿಪಿ ಕಚೇರಿಯಲ್ಲಿ ಈ ವಿಡಿಯೊ ಚಿತ್ರೀಕರಿಸಲಾಗಿದೆ ಎಂದು ತಿಳಿದುಬಂದಿದೆ. ಮಹಿಳೆಯೊಬ್ಬರು ತಮ್ಮ ಮೊಬೈಲ್ನಲ್ಲಿ ಉದ್ದೇಶಪೂರ್ವಕವಾಗಿ ಈ ವಿಡಿಯೊ ಚಿತ್ರೀಕರಿಸಿದ್ದಾರೆ ಎಂದು ವರದಿ ಉಲ್ಲೇಖಿಸಿದೆ’ ಎಂದು ಮೂಲಗಳು ಹೇಳಿವೆ. ವಿಡಿಯೊ ಬಹಿರಂಗವಾದ ಮೇಲೆ ಇಬ್ಬರು ಮಹಿಳೆಯರೂ ಸಂಪರ್ಕಕ್ಕೆ ಸಿಗದೇ ನಾಪತ್ತೆ ಆಗಿದ್ದಾರೆ ಎಂದು ಮೂಲಗಳು ಹೇಳಿವೆ.

ನೋಟಿಸ್ ಜಾರಿ

ವಿಡಿಯೊ ಅಸಲಿಯೆಂದು ದೃಢಪಟ್ಟಿರುವ ಬೆನ್ನಲ್ಲೇ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯು (ಡಿಪಿಎಆರ್) ರಾಮಚಂದ್ರರಾವ್ ಅವರಿಗೆ ನೋಟಿಸ್ ಜಾರಿ ಮಾಡಿ ಇಲಾಖಾ ತನಿಖೆ ಆರಂಭಿಸಿದೆ. ರಾಮಚಂದ್ರರಾವ್ ಅವರು ಮೇ 31ರಂದು ಸೇವೆಯಿಂದ ನಿವೃತ್ತಿಯಾಗಲಿದ್ದಾರೆ. ಆದರೆ ಪ್ರಕರಣ ಸಂಬಂಧ ಆಂತರಿಕ ತನಿಖೆ ನಡೆಯುತ್ತಿರುವ ಕಾರಣ ಅವರ ಪಿಂಚಣಿ ಹಾಗೂ ಸೇವಾ ನಿವೃತ್ತಿ ಸೌಲಭ್ಯಗಳನ್ನು ತಾತ್ಕಾಲಿಕವಾಗಿ ತಡೆಹಿಡಿಯಲಾಗುವುದು ಎಂದು ಡಿಪಿಎಆರ್ನ ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.