ಬೆಂಗಳೂರು: ಐಪಿಎಸ್ ಅಧಿಕಾರಿ ಕೆ.ರಾಮಚಂದ್ರ ರಾವ್ ಅವರ ಅಮಾನತು ಆದೇಶವನ್ನು ರಾಜ್ಯ ಸರ್ಕಾರವು ಬುಧವಾರ ವಾಪಸ್ ಪಡೆದಿದೆ.

‘ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ(ಡಿಸಿಆರ್ಇ) ಡಿಜಿಪಿಯಾಗಿದ್ದ ರಾಮಚಂದ್ರ ರಾವ್, ತಮ್ಮ ಕಚೇರಿಯಲ್ಲಿ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದರು’ ಎಂಬ ಆರೋಪದ ಮೇಲೆ ಜ.19ರಂದು ಅಮಾನತು ಮಾಡಿ ಪ್ರಕರಣದ ತನಿಖೆಗೆ ಆದೇಶಿಸಲಾಗಿತ್ತು. ಅಮಾನತು ಆದೇಶವನ್ನು ಇದೀಗ ವಾಪಸ್ ಪಡೆದಿರುವ ಸರ್ಕಾರವು ತಕ್ಷಣದಿಂದಲೇ ಜಾರಿಗೆ ಬರುವಂತೆ ಅವರನ್ನು ಸೇವೆಗೆ ಮರು ಸೇರ್ಪಡೆಗೊಳಿಸಿದೆ.

ಡೈರೆಕ್ಟರ್ ಜನರಲ್ ಆಫ್ ಪೊಲೀಸ್ (ಪೊಲೀಸ್ ಮ್ಯಾನುಯಲ್) ಹುದ್ದೆಗೆ ನೇಮಿಸಲಾಗಿದೆ. ಈ ಹುದ್ದೆಯನ್ನು ಸಿಐಡಿ ಡಿಜಿಪಿ ಹುದ್ದೆಗೆ ಸಮಾನವೆಂದು ಪರಿಗಣಿಸಿ, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿ ಬಿ.ಎಸ್.ಸಂಜಯ್ ಆದೇಶಿಸಿದ್ದಾರೆ. ರಾಮಚಂದ್ರರಾವ್ ಇದೇ 31ರಂದು ಸೇವೆಯಿಂದ ನಿವೃತ್ತಿ ಆಗಲಿದ್ದಾರೆ ಎಂದು ಮೂಲಗಳು ಹೇಳಿವೆ.

‘ವಿಡಿಯೊ ಅಸಲಿ’ ಎಂದಿದ್ದ ತನಿಖಾ ಸಮಿತಿ:

ಪ್ರಕರಣದ ತನಿಖೆಗೆ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಆರ್.ಹಿತೇಂದ್ರ ನೇತೃತ್ವದಲ್ಲಿ ನಾಲ್ವರು ಐಪಿಎಸ್ ಅಧಿಕಾರಿಗಳನ್ನು ಒಳಗೊಂಡ ಸಮಿತಿಯನ್ನು ಸರ್ಕಾರ ರಚಿಸಿತ್ತು. ಸಮಿತಿಯು ತನಿಖೆ ನಡೆಸಿ, 100 ಪುಟಗಳ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿತ್ತು. ‘ವಿಡಿಯೊ ಅಸಲಿ’ ಎಂದು ವರದಿಯಲ್ಲಿ ಉಲ್ಲೇಖಿಸಿತ್ತು.

‘ವಿಡಿಯೊದಲ್ಲಿ ಯಾವುದೇ ಮಾರ್ಪಾಟು ಆಗಿಲ್ಲ’ ಎಂದು ಎಫ್ಎಸ್ಎಲ್ ವರದಿಯಿಂದ ದೃಢಪಟ್ಟಿದೆ ಎಂದೂ ತನಿಖಾ ಸಮಿತಿ ಹೇಳಿತ್ತು. ವಿಡಿಯೊ ಅಸಲಿಯೆಂದು ದೃಢಪಟ್ಟ ಬೆನ್ನಲ್ಲೇ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯು (ಡಿಪಿಎಆರ್) ರಾಮಚಂದ್ರರಾವ್ ಅವರಿಗೆ ನೋಟಿಸ್ ಜಾರಿ ಮಾಡಿ ಇಲಾಖಾ ತನಿಖೆ ಆರಂಭಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.