ಶನಿವಾರ, ಮೇ 21, 2022
25 °C

ಐಪಿಎಸ್‌ ಅಧಿಕಾರಿಗಳ ವರ್ಗ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಡಿಜಿಪಿ ಡಾ.ಪಿ.ರವೀಂದ್ರನಾಥ್ ಅವರನ್ನು ಪೊಲೀಸ್‌ ತರಬೇತಿ ವಿಭಾಗದ ಡಿಜಿಪಿ ಆಗಿ ವರ್ಗಾವಣೆ ಮಾಡಲಾಗಿದೆ. ಸ್ಥಳ ನಿರೀಕ್ಷಣೆಯಲ್ಲಿದ್ದ ಎಡಿಜಿಪಿ ಜೆ. ಅರುಣ್‌ ಚಕ್ರವರ್ತಿ ಅವರನ್ನು ನಾಗರಿಕ ಹಕ್ಕುಜಾರಿ ನಿರ್ದೇಶನಾಲಯಕ್ಕೆ ನಿಯೋಜಿಸಲಾಗಿದೆ.

ಪೊಲೀಸ್‌ ತರಬೇತಿ ವಿಭಾಗದ ಎಡಿಜಿಪಿ ಪಿ. ಹರಿಶೇಖರನ್‌ ಅವರನ್ನು ರಾಜ್ಯ ಅಗ್ನಿ ಮತ್ತು ತುರ್ತುಸೇವೆಗಳ ಮತ್ತು ಎಸ್‌ಡಿಆರ್‌ಎಫ್‌ ಘಟಕದ ಎಡಿಜಿಪಿಯಾಗಿ ವರ್ಗಾಯಿಸಲಾಗಿದೆ.

ನಕಲಿ ಜಾತಿ ಪ್ರಮಾಣಪತ್ರಗಳ ವಿಚಾರಣೆ ಕುರಿತು ಈಚೆಗೆ ಮಾಹಿತಿ ನೀಡಿದ್ದ ಡಾ.ಪಿ. ರವೀಂದ್ರನಾಥ್, ‘ಒಟ್ಟು 1,097 ವ್ಯಕ್ತಿಗಳ ವಿರುದ್ಧ ಕ್ರಿಮಿನಲ್‌ ಪ್ರಕರಣ ದಾಖಲಿಸಿದ್ದು, 165 ಪ್ರಕರಣಗಳಲ್ಲಿ ತಹಶೀಲ್ದಾರ್‌ ಮತ್ತು ಇತರ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮಕ್ಕೆ ಪತ್ರ ಬರೆಯಲಾಗಿದೆ’ ಎಂದಿದ್ದರು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು