ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಕ್ರಮವಾಗಿ ನೆಲೆಸಿದ್ದ ಇರಾನ್‌ ಪ್ರಜೆ ಬಂಧನ

ವಿಮಾನ ನಿಲ್ದಾಣದ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ
Last Updated 10 ಜನವರಿ 2020, 18:57 IST
ಅಕ್ಷರ ಗಾತ್ರ

ಬೆಂಗಳೂರು: ತನ್ನ ವಿರುದ್ಧ ಲುಕ್‌ ಔಟ್ ನೋಟಿಸ್‌ ಜಾರಿಯಾಗಿದ್ದರೂ ಹೆಸರು ಬದಲಾವಣೆ ಮಾಡಿಕೊಂಡು ನಗರದಲ್ಲಿ ಅಕ್ರಮವಾಗಿ ನೆಲೆಸಿದ್ದ ಇರಾನ್ ಪ್ರಜೆ ಫಜೆಲ್ ರೆಜಾ (49) ಎಂಬಾತ, ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ವಲಸೆ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದಾನೆ.

‘ಆರೋಪಿ ಫಜೆಲ್‌ನನ್ನು ವಶಕ್ಕೆ ಪಡೆದಿದ್ದ ವಲಸೆ ಅಧಿಕಾರಿಗಳು ಪೊಲೀಸರಿಗೆ ಹಸ್ತಾಂತರಿಸಿದ್ದಾರೆ. ಆರೋಪಿ ವಿರುದ್ಧ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ’ ಎಂದು ಹಿರಿಯ ಅಧಿಕಾರಿಯೊಬ್ಬರು ಹೇಳಿದರು.

‘ಮುಂಬೈಗೆ ಹೋಗಲೆಂದು ಆರೋಪಿ ಜ. 7ರಂದು ನಿಲ್ದಾಣಕ್ಕೆ ಬಂದಿದ್ದ. ಆತನ ದಾಖಲೆಗಳನ್ನು ವಲಸೆ ಅಧಿಕಾರಿಗಳು ಪರಿಶೀಲನೆ ನಡೆಸಿದ್ದರು. ಆರೋಪಿ ಬಳಿ ಬೇರೊಂದು ದೇಶದ ನಕಲಿ ಪಾಸ್‌ಪೋರ್ಟ್ ಸಿಕ್ಕಿತ್ತು. ಇತರೆ ದಾಖಲೆಗಳಲ್ಲೂ ಬೇರೆ ಬೇರೆ ಹೆಸರುಗಳಿರುವುದು ಗಮನಕ್ಕೆ ಬಂದಿತ್ತು.’

‘ಆರೋಪಿಯನ್ನು ವಶಕ್ಕೆ ಪಡೆದಿದ್ದ ವಲಸೆ ಅಧಿಕಾರಿಗಳು ಹೆಚ್ಚಿನ ವಿಚಾರಣೆಗೆ ಒಳಪಡಿಸಿದ್ದರು. ಅವಾಗಲೇ ಆತ, ಇರಾನ್ ಪ್ರಜೆ ಎಂಬುದನ್ನು ಒಪ್ಪಿಕೊಂಡಿದ್ದ.’

‘ಮುಂಬೈನಲ್ಲಿ ನೆಲೆಸಿದ್ದ ಆತನ ವೀಸಾ ಅವಧಿ ಹಲವು ತಿಂಗಳ ಹಿಂದೆಯೇ ಮುಕ್ತಾಯಗೊಂಡಿತ್ತು. ಹೀಗಾಗಿ, ಆತನ ವಿರುದ್ಧ ಲುಕ್‌ಔಟ್ ನೋಟಿಸ್‌ ಜಾರಿ ಮಾಡಲಾಗಿತ್ತು. ಮುಂಬೈನಿಂದ ಬೆಂಗಳೂರಿಗೆ ಬಂದು ಅಕ್ರಮವಾಗಿ ನೆಲೆಸಿದ್ದ ಆರೋಪಿ, ಇಲ್ಲಿಯೂ ಬೇರೊಂದು ಹೆಸರು ಇಟ್ಟುಕೊಂಡಿದ್ದ. ಆ ಹೆಸರಿನಲ್ಲೇ ನಕಲಿ ಪಾಸ್‌ಪೋರ್ಟ್ ಮಾಡಿಸಿಕೊಂಡಿದ್ದ. ಅದನ್ನೂ ಜಪ್ತಿ ಮಾಡಲಾಗಿದೆ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT