ಗುರುವಾರ , ಅಕ್ಟೋಬರ್ 1, 2020
24 °C

ಇರಾನಿ ಗ್ಯಾಂಗ್ ಸಿಸಿಬಿ ಬಲೆಗೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

‌ಬೆಂಗಳೂರು: ಮಹಿಳೆಯರ ಸರ ಕಳವು ಮಾಡಿ ಪರಾರಿಯಾಗುತ್ತಿದ್ದ ಆರೋಪದಡಿ ಇರಾನಿ ಗ್ಯಾಂಗ್‌ನ ನಾಲ್ವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

‘ಮಧ್ಯಪ್ರದೇಶದ ಅಬು ಹೈದರ್ (52), ಮೆಹದಿ ಹಸನ್ (45), ಆಂಧ್ರಪದೇಶದ ಸಾದಿಕ್ (34) ಹಾಗೂ ಕಲಬುರ್ಗಿಯ ಹುಸೇನ್ (29) ಬಂಧಿತರು. ಆರೋಪಿಗಳಿಂದ ₹ 85 ಲಕ್ಷ ಮೌಲ್ಯದ 1.700 ಕೆ.ಜಿ ತೂಕದ ಚಿನ್ನಾಭರಣಗಳನ್ನು ಜಪ್ತಿ ಮಾಡಲಾಗಿದೆ’ ಎಂದು ಪೊಲೀಸ್ ಕಮಿಷನರ್ ಕಮಲ್ ಪಂತ್ ಅವರು ಶನಿವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

‘ಕರ್ನಾಟಕ, ತಮಿಳುನಾಡು, ಜಾರ್ಖಂಡ್, ಆಂಧ್ರಪ್ರದೇಶಗಳಲ್ಲಿ ಕೃತ್ಯ ಎಸಗುತ್ತಿದ್ದ ಆರೋಪಿಗಳು, ಕದ್ದ ಚಿನ್ನಾಭರಣವನ್ನು ಕಲಬುರ್ಗಿ ಹಾಗೂ ಮಧ್ಯಪ್ರದೇಶದಲ್ಲಿ ಮಾರಾಟ ಮಾಡಿ ಬಂದ ಹಣದಲ್ಲಿ ಐಷಾರಾಮಿ ಜೀವನ ನಡೆಸುತ್ತಿದ್ದರು’ ಎಂದರು.

‘ಆರೋಪಿಗಳ ಬಂಧನದಿಂದ ನಗರದ 30 ಸರಗಳವು ಪ್ರಕರಣಗಳು ಪತ್ತೆಯಾಗಿವೆ. ಈ ಇರಾನಿ ಗ್ಯಾಂಗ್‌ನಲ್ಲಿ ಮತ್ತಷ್ಟು ಮಂದಿ ಇರುವ ಅನುಮಾನವಿದೆ’ ಎಂದು ತಿಳಿಸಿದರು. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು