ಶನಿವಾರ, ಅಕ್ಟೋಬರ್ 24, 2020
28 °C

ಪಿಪಿಇ ಕಿಟ್ ವಿಲೇವಾರಿಗೆ ವ್ಯವಸ್ಥೆ ಇದೆಯೇ: ಹೈಕೋರ್ಟ್ ಪ್ರಶ್ನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಬಳಕೆಯಾದ ಪಿಪಿಇ ಕಿಟ್ ಸಂಗ್ರಹ ಮತ್ತು ವಿಲೇವಾರಿಗೆ ಯಾವ ರೀತಿಯ ವ್ಯವಸ್ಥೆ ಇದೆ ಎಂಬುದರ ಬಗ್ಗೆ ವರದಿ ಸಲ್ಲಿಸುವಂತೆ ಬಿಬಿಎಂಪಿ ಮತ್ತು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.

ಕೋವಿಡ್ ಸಂಬಂಧದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ಮತ್ತು ನ್ಯಾಯಮೂರ್ತಿ ಅರವಿಂದಕುಮಾರ್ ಅವರಿದ್ದ ವಿಭಾಗೀಯ ಪೀಠ, ‘ಪ್ಲಾಸ್ಟಿಕ್‌ಗಿಂತ ಪಿಪಿಇ ಕಿಟ್‌ಗಳ ಅವೈಜ್ಞಾನಿಕ ವಿಲೇವಾರಿ ಹೆಚ್ಚು ಗಂಭೀರವಾದ ವಿಷಯ’ ಎಂದು ಅಭಿಪ್ರಾಯಪಟ್ಟಿತು.

ಬೆಂಗಳೂರಿನಲ್ಲೇ 380 ಕೋವಿಡ್ ಆಸ್ಪತ್ರೆಗಳಿವೆ. ಬೇರೆ ಆಸ್ಪತ್ರೆಗಳಲ್ಲೂ ಪಿಪಿಇ ಕಿಟ್‌ ಬಳಸಲಾಗುತ್ತಿದೆ. ಇವುಗಳನ್ನು ವಿಲೇವಾರಿ ಮಾಡಲು ವಿಪತ್ತು ನಿರ್ವಹಣಾ ಕಾಯ್ದೆಯಡಿ ನಿರ್ದಿಷ್ಟ ಆದೇಶಗಳನ್ನು ಮಾಡಲಾಗಿದೆಯೇ ಎಂಬುದೇ ಪ್ರಶ್ನೆ. ಈ ಬಗ್ಗೆ ಪ್ರತಿಕ್ರಿಯೆ ಸಲ್ಲಿಸುವಂತೆ ಸರ್ಕಾರ ಮತ್ತು ಕರ್ನಾಟಕ ಮಾಲಿನ್ಯ ನಿಯಂತ್ರಣಾ ಮಂಡಳಿಗೆ ಪೀಠ ನಿರ್ದೇಶನ ನೀಡಿತು.

ಈ ಸಂಬಂಧ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿರುವ ವಕೀಲ ಎಂ.ಕೆ. ವಿಜಯಕುಮಾರ್, ‘ರಾಜ್ಯ ಸರ್ಕಾರ ಹೊರಡಿಸಿರುವ ಮಾರ್ಗದರ್ಶಿ ಸೂತ್ರಗಳಲ್ಲಿ(ಎಸ್‌ಒಪಿ) ಪಿಪಿಇ ಕಿಟ್‌ಗಳ ವಿಲೇವಾರಿ ಬಗ್ಗೆ ನಿರ್ದಿಷ್ಟವಾಗಿ ಹೇಳಿಲ್ಲ’ ಎಂದು ತಿಳಿಸಿದ್ದಾರೆ.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.