ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇಸ್ಕಾನ್‌ನ ರಾಜಾಧಿರಾಜ ಗೋವಿಂದ ದೇವಾಲಯ ಉದ್ಘಾಟಿಸಿದ ರಾಷ್ಟ್ರಪತಿ

Last Updated 14 ಜೂನ್ 2022, 6:56 IST
ಅಕ್ಷರ ಗಾತ್ರ

ಬೆಂಗಳೂರು: ಇಸ್ಕಾನ್‌ನ ನೂತನ ರಾಜಾಧಿರಾಜ ಗೋವಿಂದ ದೇವಾಲಯ ಹಾಗೂ ಸಾಂಸ್ಕೃತಿಕ ಸಂಕೀರ್ಣ ಕಟ್ಟಡವನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಮಂಗಳವಾರ ಉದ್ಘಾಟಿಸಿದರು.

ಕನಕಪುರ ರಸ್ತೆಯ ವಸಂತಪುರದ ವಿಶಾಲ‌ ಜಾಗದಲ್ಲಿ ಈ ನೂತನ ದೇವಾಲಯ ನಿರ್ಮಿಸಲಾಗಿದೆ. ದೇವಾಲಯಕ್ಕೆ ಮಂಗಳವಾರ ಬೆಳಿಗ್ಗೆ ಪ್ರವೇಶಿಸಿದ ರಾಷ್ಟ್ರಪತಿ, ಪತ್ನಿ ಸವಿತಾ ಸಮೇತ ದೇವರ ದರ್ಶನ ಪಡೆದರು. ರಾಜ್ಯಪಾಲ ಥಾವರ್‌ಚಂದ್ ಗೆಹಲೋತ್‌, ಮುಖ್ಯಮಂತ್ರಿ ಬಸವರಾಜ‌ ಬೊಮ್ಮಾಯಿ ಜೊತೆಗಿದ್ದರು.

ದರ್ಶನ ನಂತರ, ದೇವಾಲಯ ಆವರಣದ ವೇದಿಕೆಯಲ್ಲಿ ಉದ್ಘಾಟನಾ ಕಾರ್ಯಕ್ರಮ ನಡೆಯಿತು.

'ತಿರುಮಲ ಮಾದರಿಯಲ್ಲಿ ಈ ದೇವಾಲಯ ನಿರ್ಮಿಸಲಾಗಿದೆ. ಮುಂದಿನ 48 ದಿನಗಳಲ್ಲಿ ವಿಗ್ರಹ ಪ್ರತಿಷ್ಠಾಪನೆ ನಡೆಯಲಿದೆ. ಆಗಸ್ಟ್ 1ರ ನಂತರ ಸಾರ್ವಜನಿಕರ‌ ಪ್ರವೇಶಕ್ಕೆ ದೇವಾಲಯ ಮುಕ್ತವಾಗಲಿದೆ' ಎಂದು ಇಸ್ಕಾನ್ ಬೆಂಗಳೂರು ಅಧ್ಯಕ್ಷ ಮಧು ಪಂಡಿತ್ ದಾಸ್ ಹೇಳಿದರು.

'ದೇಶದ ವಿವಿಧ ಭಾಗಗಳ ಭಕ್ತರ ಭಕ್ತಿಯ ಕ್ಷೇತ್ರ ಇದಾಗಲಿದೆ. ನಿತ್ಯವೂ ಉಚಿತ ಊಟ ಇರಲಿದೆ' ಎಂದೂ ತಿಳಿಸಿದರು‌.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT