ಬೆಂಗಳೂರು: ಶ್ರೀ ಕೃಷ್ಣ ಜನ್ಮಾಷ್ಟಮಿ ಹಿನ್ನೆಲೆಯಲ್ಲಿ ರಾಜಾಜಿನಗರದ ವೆಸ್ಟ್ ಆಫ್ ಕಾರ್ಡ್ ರಸ್ತೆಯ ಇಸ್ಕಾನ್ ದೇವಸ್ಥಾನದ ಸುತ್ತಮುತ್ತ ಆಗಸ್ಟ್ 15ರಿಂದ 16ರವರೆಗೆ ಸಂಚಾರ ವ್ಯವಸ್ಥೆಯಲ್ಲಿ ಬದಲಾವಣೆ ಮಾಡಲಾಗಿದೆ.

‘ಲಕ್ಷಾಂತರ ಭಕ್ತರು, ಗಣ್ಯ ವ್ಯಕ್ತಿಗಳು ದೇವರ ದರ್ಶನಕ್ಕಾಗಿ ಇಸ್ಕಾನ್ ದೇವಸ್ಥಾನಕ್ಕೆ ಆಗಮಿಸಲಿದ್ದು, ವಾಹನ ದಟ್ಟಣೆ ಉಂಟಾಗಲಿದೆ. ಹೀಗಾಗಿ, ಸುಗಮ ಸಂಚಾರದ ದೃಷ್ಟಿಯಿಂದ ವೆಸ್ಟ್ ಆಫ್ ಕಾರ್ಡ್ ರಸ್ತೆ ಸುತ್ತಮುತ್ತ ಸಂಚಾರ ವ್ಯವಸ್ಥೆಯಲ್ಲಿ ಮಾರ್ಪಾಡು ಮಾಡಲಾಗಿದೆ. ದೇವಸ್ಥಾನಕ್ಕೆ ಬರುವ ಸಾರ್ವಜನಿಕರು ಸಾಧ್ಯವಾದಷ್ಟು ಮೆಟ್ರೊ ರೈಲು, ಬಿಎಂಟಿಸಿ ಬಸ್ಗಳಲ್ಲಿ ಸಂಚರಿಸಬೇಕು’ ಎಂದು ಪೊಲೀಸರು ತಿಳಿಸಿದ್ದಾರೆ.

ಸಂಚಾರ ಬದಲು:

ವೆಸ್ಟ್ ಆಫ್ ಕಾರ್ಡ್ ರಸ್ತೆಯಲ್ಲಿ ಸೋಪ್ ಫ್ಯಾಕ್ಟರಿ ಜಂಕ್ಷನ್ನಿಂದ ವಿಜಯನಗರ, ನಂದಿನಿ ಲೇಔಟ್, ಮಹಾಲಕ್ಷ್ಮಿ ಲೇಔಟ್ ಕಡೆಗೆ ಹೋಗುವ ವಾಹನಗಳು ಸೋಪ್ ಫ್ಯಾಕ್ಟರಿ ಜಂಕ್ಷನ್ನಲ್ಲಿ ಡಾ.ರಾಜ್ಕುಮಾರ್ ರಸ್ತೆಗೆ ಹೋಗಿ 10ನೇ ಕ್ರಾಸ್ ಅಥವಾ ಕೇತಮಾರನಹಳ್ಳಿ ಜಂಕ್ಷನ್ನಲ್ಲಿ ಬಲಕ್ಕೆ ತಿರುಗಿ ಒಂದನೇ ಬ್ಲಾಕ್ ರಾಜಾಜಿನಗರ ಸಿಗ್ನಲ್ನಲ್ಲಿ ವೆಸ್ಟ್ ಆಫ್ ಕಾರ್ಡ್ ರಸ್ತೆಗೆ ಸಾಗಬೇಕು.

ವೆಸ್ಟ್ ಆಫ್ ಕಾರ್ಡ್ ರಸ್ತೆಯಲ್ಲಿ ಸೋಪ್ ಫ್ಯಾಕ್ಟರಿ ಜಂಕ್ಷನ್ನಿಂದ ಮಹಾಲಕ್ಷ್ಮಿ ಲೇಔಟ್ ಮೆಟ್ರೊ ನಿಲ್ದಾಣದವರೆಗೆ ಪ್ರಯಾಣಿಕರ ಪಿಕ್ಅಪ್ ಮತ್ತು ಡ್ರಾಪ್ ಮಾಡುವುದನ್ನು ನಿರ್ಬಂಧಿಸಲಾಗಿದೆ.

ಇಸ್ಕಾನ್ ದೇವಸ್ಥಾನಕ್ಕೆ ಸಾರ್ವಜನಿಕರನ್ನು ಕರೆತರುವ ಆಟೊ, ಕ್ಯಾಬ್ ಚಾಲಕರು ಮಹಾಲಕ್ಷ್ಮಿ ಲೇಔಟ್ ಮೆಟ್ರೊ ನಿಲ್ದಾಣದ ಸಮೀಪ ಅಥವಾ ಸೋಪ್ ಫ್ಯಾಕ್ಟರಿ ಸಮೀಪ ಪಿಕ್ಅಪ್ ಮತ್ತು ಡ್ರಾಪ್ ಮಾಡಬೇಕು.

ಇಸ್ಕಾನ್ ದೇವಸ್ಥಾನಕ್ಕೆ ಸ್ವಂತ ವಾಹನಗಳಲ್ಲಿ ಬರುವ ಭಕ್ತರನ್ನು ಮಹಾಲಕ್ಷ್ಮಿ ಲೇಔಟ್ ಮೆಟ್ರೊ ನಿಲ್ದಾಣದಿಂದ ಸೋಪ್ ಫ್ಯಾಕ್ಟರಿ ಕಡೆಗೆ ಹೋಗುವ ರಸ್ತೆಯಲ್ಲಿ ಇಳಿಸಬೇಕು ಮತ್ತು ವಾಹನಕ್ಕೆ ಹತ್ತಿಸಿಕೊಳ್ಳಬೇಕು.

ತುಮಕೂರು ರಸ್ತೆಯಿಂದ ಮೆಜೆಸ್ಟಿಕ್ ಕಡೆಗೆ ಸಂಚರಿಸುವ ಕೆಎಸ್ಆರ್ಟಿಸಿ ಮತ್ತು ಖಾಸಗಿ ಬಸ್ಗಳು ಯಶವಂತಪುರ ಮೇಲ್ಸೇತುವೆ, ಸರ್ಕಲ್ ಮಾರಮ್ಮ ದೇವಸ್ಥಾನ, ಮಾರ್ಗೋಸಾ ರಸ್ತೆ, ಕೆ.ಸಿ. ಜನರಲ್ ಆಸ್ಪತ್ರೆ ಸಿಗ್ನಲ್ ಮಾರ್ಗವಾಗಿ ಬಂದು ಲಿಂಕ್ ರಸ್ತೆ ಮೂಲಕ ಸಾಗಬೇಕು.

ಭಕ್ತರಿಗೆ ಸಲಹೆಗಳು

ಇಸ್ಕಾನ್ ದೇವಸ್ಥಾನಕ್ಕೆ ಬರುವ ಭಕ್ತರಿಗೆ ದೇವಸ್ಥಾನದ ವತಿಯಿಂದ ಪಾಸ್ ವಿತರಿಸಿದ್ದು, ಅಂತಹವರು ನಿಗದಿತ ಸ್ಥಳಗಳಲ್ಲಿ ವಾಹನ ನಿಲ್ಲಿಸಬೇಕು.

ಭಕ್ತರು ಸಾಧ್ಯವಾದಷ್ಟು ಸಂಜೆ 5 ಗಂಟೆಯೊಳಗೆ ದೇವರ ದರ್ಶನ ಪಡೆಯಬೇಕು.

ಹಿರಿಯ ನಾಗರಿಕರು ಮತ್ತು ಮಕ್ಕಳಿಗೆ ಮಧ್ಯಾಹ್ನ 12 ಗಂಟೆಯೊಳಗೆ ದೇವರ ದರ್ಶನ ಮಾಡಿಸಿಕೊಂಡು, ಸುರಕ್ಷಿತವಾಗಿ ಮನೆಗೆ ತೆರಳಬೇಕು.

ದೇವರ ದರ್ಶನಕ್ಕೆ ಬರುವ ಭಕ್ತರು ಆಭರಣ ಮತ್ತು ಬೆಲೆ ಬಾಳುವ ವಸ್ತುಗಳನ್ನು ಧರಿಸಿ ಬರುವುದನ್ನು ತಪ್ಪಿಸಬೇಕು.

ದೇವರ ದರ್ಶನದ ನಂತರ ದೇವಸ್ಥಾನದ ಆವರಣದಲ್ಲಿ ಸೆಲ್ಫಿ, ಫೋಟೊ ತೆಗೆಸಿಕೊಳ್ಳುವುದರಲ್ಲಿ ತೊಡಗಿ, ಇತರರಿಗೆ ಅಡ್ಡಿಪಡಿಸದೆ ಶೀಘ್ರವೇ ದೇವಸ್ಥಾನದ ಆವರಣದಿಂದ ನಿರ್ಗಮಿಸಬೇಕು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.