ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇಸ್ರೊ ಅಧ್ಯಕ್ಷ ಸೋಮನಾಥ್‌ಗೆ ಗೌರವ ಡಾಕ್ಟರೇಟ್ ಪ್ರದಾನ

Published 21 ಫೆಬ್ರುವರಿ 2024, 21:22 IST
Last Updated 21 ಫೆಬ್ರುವರಿ 2024, 21:22 IST
ಅಕ್ಷರ ಗಾತ್ರ

ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯ ವತಿಯಿಂದ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೊ) ಅಧ್ಯಕ್ಷ ಎಸ್. ಸೋಮನಾಥ್ ಅವರಿಗೆ ನೀಡಲಾಗಿದ್ದ ಗೌರವ ಡಾಕ್ಟರೇಟ್ ಪದವಿಯನ್ನು ರಾಜ್ಯಪಾಲ ಥಾವರಚಂದ್ ಗೆಹಲೋತ್ ಪ್ರದಾನ ಮಾಡಿದರು. 

ವಿಶ್ವವಿದ್ಯಾಲಯ ನಗರದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಎಸ್. ಸೋಮನಾಥ್ ಅವರ ಸಾಧನೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಗೆಹಲೋತ್, ‘ಸೋಮನಾಥ್ ಅವರ ನಾಯಕತ್ವದಲ್ಲಿ ಇಸ್ರೊ ಗಮನಾರ್ಹ ಸಾಧನೆಗಳನ್ನು ಮಾಡಿದೆ. ಚಂದ್ರಯಾನ-3 ಯೋಜನೆಯ ಹಿಂದಿನ ಪ್ರೇರಕ ಶಕ್ತಿಯಾಗಿ ಅವರು ನಿರ್ಣಾಯಕ ಪಾತ್ರ ವಹಿಸಿದ್ದಾರೆ. ಅವರ ನಾಯಕತ್ವ ಮತ್ತು ದೂರದೃಷ್ಟಿಯಿಂದ ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತ ಅತ್ಯುನ್ನತ ಸಾಧನೆಗಳನ್ನು ಮಾಡುತ್ತಿದೆ’ ಎಂದು ಹೇಳಿದರು. 

‘ಕರ್ನಾಟಕವು ಶಿಕ್ಷಣ, ಮಾಹಿತಿ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿದೆ. ಇಲ್ಲಿ ಅನೇಕ ವಿಶ್ವ ದರ್ಜೆಯ ಸಂಶೋಧನಾ ಕೇಂದ್ರಗಳು ಮತ್ತು ಶಿಕ್ಷಣ ಸಂಸ್ಥೆಗಳಿವೆ. ಅದರಲ್ಲಿ ಬೆಂಗಳೂರು ವಿಶ್ವವಿದ್ಯಾಲಯವೂ ಒಂದಾಗಿದೆ’ ಎಂದರು. 

ಬೆಂಗಳೂರು ವಿಶ್ವವಿದ್ಯಾಲಯದ 58ನೇ ಘಟಿಕೋತ್ಸವ ಸಮಾರಂಭದಲ್ಲಿ ಎಸ್. ಸೋಮನಾಥ್ ಅವರಿಗೆ ಪಾಲ್ಗೊಳ್ಳಲು ಸಾಧ್ಯವಾಗಿರಲಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT