ಬೆಂಗಳೂರು: ಪತ್ನಿಯ ಕುತ್ತಿಗೆ ಬಿಗಿದು ಕೊಲೆ ಮಾಡಿದ ಪತಿ, ಇಸ್ರೊ ಸಂಸ್ಥೆಯ ನಿವೃತ್ತ ಅಧಿಕಾರಿಯನ್ನು ಆವಲಹಳ್ಳಿ ಠಾಣೆಯ ಪೊಲೀಸರು ಬುಧವಾರ ಬಂಧಿಸಿದ್ದಾರೆ.

ಬೊಮ್ಮನಹಳ್ಳಿಯ ಅಪಾರ್ಟ್ಮೆಂಟ್ವೊಂದರ ನಿವಾಸಿ ಸಂಧ್ಯಾಶ್ರೀ(65) ಕೊಲೆಯಾದ ಮಹಿಳೆ. ಕೃತ್ಯ ಎಸಗಿದ ಅವರ ಪತಿ ನಾಗಲೇಶ್ವರ ರಾವ್ (76) ಅವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.

ಆಂಧ್ರಪ್ರದೇಶದ ನಾಗಲೇಶ್ವರ ರಾವ್ ಇಸ್ರೊ ಸಂಸ್ಥೆಯಲ್ಲಿ ಕೆಲಸ ಮಾಡಿ, 16 ವರ್ಷಗಳ ಹಿಂದೆ ನಿವೃತ್ತರಾಗಿದ್ದಾರೆ. ಅವರ ಪುತ್ರ ಅಮೆರಿಕದಲ್ಲಿ ಉದ್ಯೋಗದಲ್ಲಿದ್ದಾರೆ. ಮೂರು ವರ್ಷಗಳಿಂದ ಬೊಮ್ಮನಹಳ್ಳಿಯ ವಿರ್ಟುಸೊ ಅಪಾರ್ಟ್ಮೆಂಟ್ನಲ್ಲಿ ದಂಪತಿ ನೆಲಸಿದ್ದರು.

ಬುಧವಾರ ಬೆಳಿಗ್ಗೆ 10 ಗಂಟೆ ಸುಮಾರಿಗೆ ನಾಗಲೇಶ್ವರ್ ರಾವ್ ಅವರು ಅಡುಗೆ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಪತ್ನಿ ಸಂಧ್ಯಾಶ್ರೀ ಅವರ ಕುತ್ತಿಗೆಗೆ ಟವಲ್ನಿಂದ ಬಿಗಿದು ಕೊಲೆ ಮಾಡಿದ್ಧಾರೆ. ನಂತರ, ಅಪಾರ್ಟ್ಮೆಂಟ್ನಲ್ಲಿರುವ ತಮ್ಮ ಸ್ನೇಹಿತರಿಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ. ಅಪಾರ್ಟ್ಮೆಂಟ್ನಲ್ಲಿದ್ದ ವೈದ್ಯರೊಬ್ಬರು ಬಂದು ಸಂಧ್ಯಾಶ್ರೀ ಅವರನ್ನು ಪರೀಕ್ಷಿಸಿದಾಗ ಮೃತಪಟ್ಟಿರುವುದು ಗೊತ್ತಾಗಿತ್ತು ಎಂದು ಪೊಲೀಸರು ಹೇಳಿದರು.

‘ಪತ್ನಿಯನ್ನು ಕೊಲೆ ಮಾಡಿರುವುದಾಗಿ ಆರೋಪಿ ಒಪ್ಪಿಕೊಂಡಿದ್ದಾರೆ. ಆದರೆ, ವಿಚಾರಣೆ ವೇಳೆ ಬೇರೆ ಬೇರೆ ಕಾರಣ ನೀಡುತ್ತಿದ್ದಾರೆ’ ಎಂದು ಪೊಲೀಸರು ಮಾಹಿತಿ ನೀಡಿದರು.

‘ನಾನು ಸತ್ತರೆ ಪತ್ನಿಯನ್ನು ಯಾರು ನೋಡಿಕೊಳ್ಳುತ್ತಾರೆ? ಯಾರೂ ಸಂಬಂಧಿಕರು ಇಲ್ಲ? ಆಕೆಯ ಮುಂದಿನ ಜೀವನ ಹೇಗೆ? ಹೀಗಾಗಿ ಆಕೆಯನ್ನು ಕೊಲೆ ಮಾಡಿದ್ದೇನೆ’ ಎಂದು ವಿಚಾರಣೆ ವೇಳೆ ನಾಗಲೇಶ್ವರ ರಾವ್ ಹೇಳಿದ್ದಾರೆ. ಮಾನಸಿಕ ಅಸ್ವಸ್ಥರಂತೆ ವರ್ತಿಸುತ್ತಿದ್ದಾರೆ’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಆವಲಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆರೋಪಿಗೆ ಮಾನಸಿಕ ಕಾಯಿಲೆ

ನಿವೃತ್ತಿಯ ನಂತರ ಮಾನಸಿಕ ಸಮಸ್ಯೆಯಿಂದ ಬಳಲುತ್ತಿದ್ದ ನಾಗಲೇಶ್ವರ ರಾವ್ ಚಿಕಿತ್ಸೆ ಪಡೆಯುತ್ತಿದ್ದರು. ಕೆಲವು ದಿನಗಳಿಂದ ಅವರು ಮಾತ್ರೆ ತೆಗೆದುಕೊಳ್ಳುವುದನ್ನು ನಿಲ್ಲಿಸಿದ್ದರು. ಇದರಿಂದ ಸಮಸ್ಯೆ ಗಂಭೀರವಾಗಿತ್ತು ಎಂದು ಮೂಲಗಳು ತಿಳಿಸಿವೆ. ಅಮೆರಿಕದಲ್ಲಿರುವ ದಂಪತಿಯ ಮಗಳಿಗೆ ಕೊಲೆ ಘಟನೆಯ ಬಗ್ಗೆ ಮಾಹಿತಿ ನೀಡಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಅವರು ಬಂದ ಬಳಿಕ ಮರಣೋತ್ತರ ಪರೀಕ್ಷೆ ನಡೆಸಿ ಮೃತದೇಹ ಹಸ್ತಾಂತರಿಸಲಾಗುವುದು ಎಂದು ಪೊಲೀಸರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.