ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಕ್ಷಕ್ಕೆ ಬಂದ ಕೂಡಲೇ ಅಧಿಕಾರ ಬಯಸುವುದು ಸಲ್ಲ: ಡಿಸಿಎಂ ಅಶ್ವತ್ಥ ನಾರಾಯಣ

Last Updated 24 ಜುಲೈ 2021, 19:02 IST
ಅಕ್ಷರ ಗಾತ್ರ

ಬೆಂಗಳೂರು: ‘ಪಕ್ಷಕ್ಕೆ ಬಂದ ಕೂಡಲೇ ಅಧಿಕಾರ ಬೇಕೆಂದರೆ ಆಗದು. ಪಕ್ಷಕ್ಕೆ ಮಾಡಿರುವ ಸೇವೆ ಏನು? ಯಾವ ರೀತಿಯ ಕಾಣಿಕೆ ನೀಡಿದ್ದೇವೆ ಎಂಬುದನ್ನು ಮನನ ಮಾಡಿಕೊಳ್ಳಬೇಕು. ಪಕ್ಷಕ್ಕಾಗಿ ಬದ್ಧತೆಯಿಂದ ಕೆಲಸ ಮಾಡಿದರೆ, ಪಕ್ಷವೇ ಎಲ್ಲರನ್ನೂ ಬೆಳೆಸುತ್ತದೆ’ ಎಂದು ಉಪಮುಖ್ಯಮಂತ್ರಿ ಡಾ.ಸಿ.ಎನ್.‌ ಅಶ್ವತ್ಥನಾರಾಯಣ ಸಲಹೆ ನೀಡಿದರು.

ನಗರದಲ್ಲಿ ಶನಿವಾರ ಮಲ್ಲೇಶ್ವರ ಮಂಡಲದ ಬಿಜೆಪಿ ಕಾರ್ಯಕಾರಿಣಿ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ‘ಕೋವಿಡ್‌ ಸಂಕಷ್ಟ ಎದುರಿಸುತ್ತಲೇ ಅನೇಕ ಸುಧಾರಣೆಗಳನ್ನು ಕೇಂದ್ರ ಮತ್ತು ರಾಜ್ಯದಲ್ಲಿ ಜಾರಿಗೆ ತರಲಾಗಿದೆ. ಇವೆಲ್ಲ ಸಂಗತಿಗಳನ್ನು ಜನರಿಗೆ ತಲುಪಿಸಬೇಕು. ಅವರಿಗೆ ಸಿಗುತ್ತಿರುವ ಸವಲತ್ತುಗಳ ಬಗ್ಗೆ ಮಾಹಿತಿ ನೀಡಬೇಕು’ ಎಂದರು.

ಸಂಸದ ಡಿ.ವಿ.ಸದಾನಂದ ಗೌಡ, ಮಲ್ಲೇಶ್ವರ ಮಂಡಲ ಬಿಜೆಪಿ ಕಾರ್ಯಕಾರಿ ಅಧ್ಯಕ್ಷೆ ಕಾವೇರಿ ಕೇದಾರನಾಥ, ಬೆಂಗಳೂರು ಉತ್ತರ ಬಿಜೆಪಿ ಅಧ್ಯಕ್ಷ ನಾರಾಯಣ ಗೌಡ, ಬೆಂಗಳೂರು ಉತ್ತರ ಬಿಜೆಪಿ ಘಟಕದ ಉಪಾಧ್ಯಕ್ಷ ಡಾ.ವಾಸು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT