ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನವೋದ್ಯಮಿಗಳಿಗೆ ವಂಚನೆ; ತಮ್ಮ ಬಂಧನ, ಅಕ್ಕ ಪರಾರಿ

Last Updated 2 ಸೆಪ್ಟೆಂಬರ್ 2021, 23:05 IST
ಅಕ್ಷರ ಗಾತ್ರ

ಬೆಂಗಳೂರು: ಐ.ಟಿ ಯೋಜನೆ ಕೊಡಿಸುವುದಾಗಿ ಆಮಿಷವೊಡ್ಡಿ ನವೋದ್ಯಮಿಗಳಿಂದ ಹಣ ಪಡೆದು ವಂಚಿಸಿದ ಆರೋಪದಡಿ ರೂಪೇಶ್ ಎಂಬಾತನನ್ನು ಬಾಗಲಗುಂಟೆ ಪೊಲೀಸರು ಬಂಧಿಸಿದ್ದಾರೆ. ಪ್ರಕರಣದಲ್ಲಿ ಆರೋಪಿಯಾಗಿರುವ ಆತನ ಅಕ್ಕ ಕಾವ್ಯಾ ತಲೆಮರೆಸಿಕೊಂಡಿದ್ದಾರೆ.

‘ಅಮೆರಿಕದ ಕಂಪನಿಯೊಂದರಿಂದ ಯೋಜನೆ ಕೊಡಿಸುವುದಾಗಿ ಹೇಳಿದ್ದ ಆರೋಪಿಗಳು ₹ 50 ಲಕ್ಷ ಪಡೆದು ವಂಚಿಸಿದ್ದಾರೆಂದು ನವೋದ್ಯಮಿಯೊಬ್ಬರು ಇತ್ತೀಚೆಗೆ ದೂರು ನೀಡಿದ್ದರು. ಅದರನ್ವಯ ಪ್ರಕರಣ ದಾಖಲಿಸಿಕೊಂಡು ರೂಪೇಶ್‌ನನ್ನು ಬಂಧಿಸಲಾಗಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.

‘ಎಂಇಐ ಬಡಾವಣೆ ನಿವಾಸಿಗಳಾದ ರೂಪೇಶ್ ಮತ್ತು ಕಾವ್ಯಾ, ಎಂಟು ನವೋದ್ಯಮಿಗಳಿಂದ ಹಣ ಪಡೆದಿರುವುದಕ್ಕೆ ಪುರಾವೆಗಳಿವೆ. ಲಾಕ್‌ಡೌನ್‌ನಿಂದ ಕೆಲಸವಿಲ್ಲದೇ ಆರ್ಥಿಕವಾಗಿ ಸಂಕಷ್ಟಕ್ಕೆ ಸಿಲುಕಿದ್ದ ನವೋದ್ಯಮಿಗಳು, ಹೊಸ ಯೋಜನೆಗಳಿಗಾಗಿ ಹುಡುಕಾಡುತ್ತಿದ್ದರು. ಅಂಥವರನ್ನು ಸಂಪರ್ಕಿಸುತ್ತಿದ್ದ ಆರೋಪಿಗಳು, ಕಮಿಷನ್ ನೆಪದಲ್ಲಿ ಮುಂಗಡವಾಗಿ ಹಣ ಪಡೆದು ವಂಚಿಸಿರುವುದು ತನಿಖೆಯಿಂದ ಗೊತ್ತಾಗಿದೆ’ ಎಂದೂ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT