ಮಂಗಳವಾರ, ಮಾರ್ಚ್ 21, 2023
20 °C

ಕಾಂಗ್ರೆಸ್ ಶಾಸಕ ಜಮೀರ್ ಅಹಮ್ಮದ್ ಮನೆ, ಕಚೇರಿ ಮೇಲೆ‌ ಐ.ಟಿ ದಾಳಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವ ಕಾಂಗ್ರೆಸ್ ಶಾಸಕ ಬಿ.ಜೆಡ್. ಜಮೀರ್ ಅಹಮ್ಮದ್ ಖಾನ್ ಅವರ ಮನೆ, ಕಚೇರಿಗಳ‌ ಮೇಲೆ ಗುರುವಾರ ಬೆಳಿಗ್ಗೆಯೇ ದಾಳಿ ನಡೆಸಿರುವ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು, ಶೋಧ ನಡೆಸುತ್ತಿದ್ದಾರೆ.

ಶಿವಾಜಿನಗರ ವ್ಯಾಪ್ತಿಯ ಕಂಟೋನ್ಮೆಂಟ್ ಪ್ರದೇಶದಲ್ಲಿರುವ ಜಮೀರ್ ಅವರ ಮನೆ, ಚಾಮರಾಜಪೇಟೆಯಲ್ಲಿರುವ ನ್ಯಾಷನಲ್ ಟ್ರಾವೆಲ್ಸ್ ಕಚೇರಿ, ಜಮೀರ್ ಒಡೆತನದ ಫ್ಲ್ಯಾಟ್ ಸೇರಿದಂತೆ ಹಲವು ಕಡೆಗಳಲ್ಲಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳಿಂದ ಶೋಧ ನಡೆಯುತ್ತಿದೆ.

ಜಮೀರ್ ನ್ಯಾಷನಲ್ ಟ್ರಾವೆಲ್ಸ್ ಹೆಸರಿನಲ್ಲಿ ಸಾರಿಗೆ ಕ್ಷೇತ್ರಕ್ಕೆ ಸಂಬಂಧಿಸಿದ ಉದ್ಯಮವನ್ನೂ ಹೊಂದಿದ್ದಾರೆ. ತೆರಿಗೆ ವಂಚನೆ ಆರೋಪದ ಮೇಲೆ ದಾಳಿ ನಡೆದಿದೆ.

ಬೆಳಿಗ್ಗೆ ಆರು ಗಂಟೆ ಸುಮಾರಿಗೆ ದಾಳಿ ಆರಂಭವಾಗಿದೆ. ದಾಖಲೆ ಪತ್ರಗಳ ತಪಾಸಣೆ ನಡೆಯುತ್ತಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು