ಗುರುವಾರ, 30 ನವೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು | ತೆರಿಗೆ ವಂಚನೆ ಆರೋಪ: ಉದ್ಯಮಿಗಳ ಮೇಲೆ ಐ.ಟಿ ದಾಳಿ

Published 21 ನವೆಂಬರ್ 2023, 16:18 IST
Last Updated 21 ನವೆಂಬರ್ 2023, 16:18 IST
ಅಕ್ಷರ ಗಾತ್ರ

ಬೆಂಗಳೂರು: ತೆರಿಗೆ ವಂಚನೆ ಆರೋಪದ ಮೇಲೆ ನಗರದ ಕೆಲವೆಡೆ ಉದ್ಯಮಿಗಳ ಮನೆ ಹಾಗೂ ಉದ್ಯಮ ಸಂಸ್ಥೆಗಳ ಕಚೇರಿಗಳು, ಉತ್ಪಾದನಾ ಘಟಕಗಳ ಮೇಲೆ ಮಂಗಳವಾರ ದಾಳಿಮಾಡಿದ ಆದಾಯ ತೆರಿಗೆ (ಐ.ಟಿ) ಇಲಾಖೆ ಅಧಿಕಾರಿಗಳು, ಶೋಧ ನಡೆಸಿದ್ದಾರೆ.

ಮಾಗಡಿ ರಸ್ತೆಯಲ್ಲಿರುವ ಉದ್ಯಮಿಯೊಬ್ಬರ ಮನೆ ಮೇಲೆ ಬೆಳಿಗ್ಗೆಯೇ ದಾಳಿ ಮಾಡಿದ ಆದಾಯ ತೆರಿಗೆ ಅಧಿಕಾರಿಗಳು, ತಡ ರಾತ್ರಿಯವರೆಗೂ ಶೋಧ ನಡೆಸಿದ್ದಾರೆ. ಆಡುಗೋಡಿ, ರಾಜಾಜಿನಗರದಲ್ಲೂ ಕೆಲವು ಉದ್ಯಮಿಗಳ ಮನೆಗಳಲ್ಲಿ ಶೋಧ ನಡೆಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ರಾಮನಗರ ಜಿಲ್ಲೆಯ ಹಾರೋಹಳ್ಳಿ ಪಟ್ಟಣದ ಕೈಗಾರಿಕಾ ಪ್ರದೇಶದಲ್ಲಿರುವ ಕೈಗಾರಿಕೆಯೊಂದರ ಮೇಲೂ ದಾಳಿ ಮಾಡಿದ ಐ.ಟಿ ಅಧಿಕಾರಿಗಳು, ಇಡೀ ದಿನ ಶೋಧ ನಡೆಸಿದರು.

ಹಣಕಾಸು ವಹಿವಾಟು ಮತ್ತು ಕಂಪನಿಗಳ ಉತ್ಪಾದನೆ, ಮಾರಾಟಕ್ಕೆ ಸಂಬಂಧಿಸಿದ ದಾಖಲೆಗಳನ್ನು ತನಿಖಾಧಿಕಾರಿಗಳು ವಶಕ್ಕೆ ಪಡೆದಿದ್ದಾರೆ ಎಂದು ಮೂಲಗಳು ಹೇಳಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT