ಭಾನುವಾರ, ಮೇ 9, 2021
27 °C

ಯುವಜನರು ಗಾಂಧಿ ತತ್ವಗಳನ್ನು ಪಾಲಿಸಿ: ಜೆ.ಮಂಜುನಾಥ್ ಕಿವಿಮಾತು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ‘ಸ್ವಾತಂತ್ರ್ಯ ಹೋರಾಟದಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಮಹಾತ್ಮ ಗಾಂಧಿ ಅವರ ಸರಳ ವ್ಯಕ್ತಿತ್ವ ಹಾಗೂ ಅಹಿಂಸಾ ತತ್ವವನ್ನು ಈಗಿನ ಯುವ ಜನರು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು’ ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜೆ.ಮಂಜುನಾಥ್ ತಿಳಿಸಿದರು.

ಬೆಂಗಳೂರು ನಗರ ಜಿಲ್ಲಾಡಳಿತ ಮತ್ತು ಪದವಿ ಪೂರ್ವ ಶಿಕ್ಷಣ ಇಲಾಖೆಯ ಸಹಯೋಗದಲ್ಲಿ ನಗರದ ಬನ್ನಪ್ಪ ಉದ್ಯಾನದಲ್ಲಿ ಶುಕ್ರವಾರ ನಡೆದ ‘ಸ್ವಾತಂತ್ರ್ಯ ಅಮೃತ ಮಹೋತ್ಸವ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘300 ವರ್ಷಗಳ ಬಳಿಕ ಪರಕೀಯರ ಸಂಕೋಲೆಯಿಂದ ಹೊರಬಂದು, ಭಾರತ ಸ್ವಾತಂತ್ರ್ಯ ಪಡೆಯಲು ಅನೇಕ ಹೋರಾಟಗಾರರು ತ್ಯಾಗದ ಬಲಿದಾನಗಳ ಮೂಲಕ ಶ್ರಮಿಸಿದ್ದಾರೆ. ಅವರೆಲ್ಲ ದೇಶದ ಮಹಾನ್ ಚೇತನರು’ ಎಂದರು.

ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಜಿ.ಕೆ.ಶ್ರೀರಾಮ್,‘ ದೇಶಕ್ಕೆ ಸ್ವಾತಂತ್ರ್ಯ ಬಂದು ಮುಂದಿನ ವರ್ಷಕ್ಕೆ 75ರ ವಸಂತ ದಾಟಲಿದೆ. ಅದರ ಅಂಗವಾಗಿ ಇಂದು ಯಾವುದೇ ಜಾತಿ, ಮತಗಳೆನ್ನದೆ, ನಾವೆಲ್ಲರೂ ಒಂದೇ, ನಾವೆಲ್ಲರೂ ಭಾರತೀಯರು ಎನ್ನುವ ಮನೋಭಾವನೆಯನ್ನು ಬೆಳೆಸಿಕೊಳ್ಳಬೇಕು’ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಕಾರ್ಯಕ್ರಮದ ಅಂಗವಾಗಿ ವಿಚಾರ ಸಂಕಿರಣ ಹಾಗೂ ಕಾಲ್ನಡಿಗೆ ಜಾಥಾ ಹಮ್ಮಿಕೊಳ್ಳಲಾಗಿತ್ತು.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು