ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಾನಪದ ಲೋಕ ಬೆಳ್ಳಿಹಬ್ಬಕ್ಕೆ ನಾಳೆ ಚಾಲನೆ

Last Updated 14 ಫೆಬ್ರುವರಿ 2020, 19:45 IST
ಅಕ್ಷರ ಗಾತ್ರ

ಬೆಂಗಳೂರು: ‘ಕರ್ನಾಟಕ ಜಾನಪದ ಪರಿಷತ್ತು ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ‘ಜಾನಪದ ಲೋಕದ ಬೆಳ್ಳಿಹಬ್ಬ’ ಕಾರ್ಯಕ್ರಮವನ್ನುಫೆ.16ರಂದು ಬೆಳಗ್ಗೆ 9 ಗಂಟೆಯಿಂದ ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ಹಮ್ಮಿಕೊಳ್ಳಲಾಗಿದೆ’ ಎಂದು ಪರಿಷತ್ತಿನ ಅಧ್ಯಕ್ಷ ಟಿ.ತಿಮ್ಮೇಗೌಡ ತಿಳಿಸಿದರು.

ಶುಕ್ರವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,‘ಕಾರ್ಯಕ್ರಮವನ್ನು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಉದ್ಘಾಟಿಸಲಿದ್ದಾರೆ. ನಿರ್ಮಲಾನಂದನಾಥ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ. ‘ಜಾನಪದ ಜಗತ್ತು’ ಸಂಚಿಕೆಯನ್ನು ಕನ್ನಡ ಮತ್ತು ಸಂಸ್ಕೃತಿ ಸಚಿವ ಸಿ.ಟಿ.ರವಿ ಬಿಡುಗಡೆ ಮಾಡಲಿದ್ದಾರೆ. ಜಾನಪದ ಮೆರವಣಿಗೆಯನ್ನು ಮೇಯರ್‌ ಎಂ.ಗೌತಮ್ ಕುಮಾರ್ ಉದ್ಘಾಟಿಸಲಿದ್ದಾರೆ. ಜಾನಪದ ಹಿರಿಯ ವಿದ್ವಾಂಸರು ಹಾಗೂ ಕಲಾವಿದರನ್ನು ಸನ್ಮಾನಿಸಲಾಗುವುದು’ ಎಂದರು.

17ರಿಂದ ಪ್ರವಾಸಿ ಜಾನಪದ ಲೋಕೋತ್ಸವ

‘ಇದೇ 17 ಮತ್ತು 18ರಂದು ಬೆಳಿಗ್ಗೆ 10ರಿಂದ ರಾತ್ರಿ 9 ಗಂಟೆಯವರೆಗೆ ಪ್ರವಾಸಿ ಜಾನಪದ ಲೋಕೋತ್ಸವವನ್ನು ರಾಮನಗರದ ಜಾನಪದ ಲೋಕದಲ್ಲಿ ಹಮ್ಮಿಕೊಳ್ಳಲಾಗಿದೆ’ ಎಂದು ಮಾಹಿತಿ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT