ಮಂಗಳವಾರ, ಫೆಬ್ರವರಿ 18, 2020
17 °C

ಎರಡನೇ ಹಂತದ ನಗರಗಳಲ್ಲಿ ಹೂಡಿಕೆ ಸಮಾವೇಶ: ಶೆಟ್ಟರ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಜ್ಯದ ಎರಡನೇ ಹಂತದ ನಗರಗಳಲ್ಲಿ ಬಂಡವಾಳ ಹೂಡಿಕೆಗೆ ಅವಕಾಶ ನೀಡಲು ಕ್ರಮ ಕೈಗೊಂಡಿದ್ದು, ಇದರ ಭಾಗವಾಗಿ ಫೆಬ್ರುವರಿ 14 ರಂದು ಹುಬ್ಬಳ್ಳಿಯಲ್ಲಿ ‘ಇನ್ವೆಸ್ಟ್‌ ಕರ್ನಾಟಕ’ ಸಮಾವೇಶ ಆಯೋಜಿಸಲಾಗಿದೆ ಎಂದು ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್‌ ಹೇಳಿದ್ದಾರೆ.

ನಗರದ ಉದ್ಯೋಗ ಮಿತ್ರ ಕಚೇರಿಯಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಇದಕ್ಕೆ ಪೂರಕವಾಗಿ ಜನವರಿ 29 ರಂದು ಹೈದರಾಬಾದ್‌ನಲ್ಲಿ ರೋಡ್‌ ಶೋ ನಡೆಸಲಾಗುವುದು ಎಂದು ತಿಳಿಸಿದರು.

ಮುಂಬೈನಲ್ಲೂ ಇತ್ತೀಚೆಗೆ ರೋಡ್‌ ಶೋ ನಡೆಸಲಾಗಿತ್ತು. ಆ ಸಂದರ್ಭದಲ್ಲಿ ಕೆಲವು ದೊಡ್ಡ ಉದ್ದಿಮೆದಾರರನ್ನು ಸಮಾವೇಶಕ್ಕೆ ಆಹ್ವಾನ ನೀಡಿದ್ದೇವೆ ಎಂದು ಶೆಟ್ಟರ್‌ ಹೇಳಿದರು.

ನಗರಗಳಲ್ಲಿ ಕೈಗಾರಿಕೆಗಳನ್ನು ಬೆಳೆಸುವುದಕ್ಕೆ ಪೂರಕವಾಗಿ ನೂತನ ಕೈಗಾರಿಕಾ ನೀತಿ ಸಿದ್ಧಪಡಿಸಲಾಗುತ್ತಿದೆ.
ಇದರ ಕರಡು ಪ್ರತಿ ಸಿದ್ಧವಾಗಿದೆ. ಇತರೆ ಇಲಾಖೆಗಳಿಂದ ಅಭಿಪ್ರಾಯ ಸಂಗ್ರಹಿಸಿದ ಬಳಿಕ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ಪಡೆಯಲಾಗುವುದು ಎಂದರು. 

‘ಕೈಗಾರಿಕೆಗಳಿಗೆ ಪ್ರತ್ಯೇಕ ತೆರಿಗೆ ನೀತಿ ಜಾರಿಗೆ ತರಲು ಚಿಂತನೆ ನಡೆಸಲಾಗಿದೆ. ಕೈಗಾರಿಕೆಗಳಿಗೆ ವಾಣಿಜ್ಯ ಅಥವಾ ರೆಸಿಡೆನ್ಷಿಯಲ್‌ ತೆರಿಗೆ ಈ ಎರಡರಲ್ಲಿ ಯಾವ ತೆರಿಗೆ ವಿಧಿಸಬೇಕು ಎಂಬ ಬಗ್ಗೆ ಗೊಂದಲವಿದೆ. ಇದರ ನಿವಾರಣೆಗೆ ಏಕರೂಪದ ತೆರಿಗೆ ನಿಗದಿ ಮಾಡಲು ಸಹ ಕ್ರಮ ಕೈಗೊಳ್ಳಲಾಗುತ್ತಿದೆ’ ಎಂದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು