ಮಂಗಳವಾರ, ಮೇ 17, 2022
23 °C

ಮಗಳ ಮೇಲೆ ಅತ್ಯಾಚಾರ: ತಂದೆಗೆ 20 ವರ್ಷ ಜೈಲು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಮಗಳ ಮೇಲೆ ಅತ್ಯಾಚಾರ ಎಸಗಿದ್ದ ತಂದೆ ಸರ್ವೇಶ್‌ (44) ಎಂಬಾತನಿಗೆ 20 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ನಗರದ ನ್ಯಾಯಾಲಯ ಆದೇಶ ಹೊರಡಿಸಿದೆ.

‘ಬಿಹಾರದ ಸರ್ವೇಶ್, ಪತ್ನಿ ಹಾಗೂ 12 ವರ್ಷದ ಮಗಳ ಜೊತೆ ಕೆಲ ವರ್ಷಗಳ ಹಿಂದೆ ಬೆಂಗಳೂರಿಗೆ ಬಂದಿದ್ದ. ಎಚ್‌ಎಎಲ್‌ ಠಾಣೆ ವ್ಯಾಪ್ತಿಯಲ್ಲಿ ವಾಸವಿದ್ದ. ದಂಪತಿ ಕೂಲಿ ಕೆಲಸ ಮಾಡುತ್ತಿದ್ದರು’ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದರು.

‘2015ರಲ್ಲಿ ಪತ್ನಿ ಸಂಬಂಧಿಕರ ಕಾರ್ಯಕ್ರಮ ನಿಮಿತ್ತ ಬಿಹಾರಕ್ಕೆ ಹೋಗಿದ್ದರು. ಸರ್ವೇಶ್ ಹಾಗೂ ಮಗಳು ಮಾತ್ರ ಮನೆಯಲ್ಲಿದ್ದರು. ಅದೇ ವೇಳೆಯೇ ಅಪರಾಧಿ, ಮಗಳ ಮೇಲೆ ಅತ್ಯಾಚಾರ ಎಸಗಿದ್ದ. ಸ್ಥಳೀಯರು ನೀಡಿದ್ದ ಮಾಹಿತಿ ಆಧರಿಸಿ ಮಕ್ಕಳ ಸಹಾಯವಾಣಿ ಸಿಬ್ಬಂದಿ ಬಾಲಕಿಯನ್ನು ರಕ್ಷಿಸಿದ್ದರು’

‘ಘಟನೆ ಸಂಬಂಧ ಬಾಲಕಿ ಹಾಗೂ ತಾಯಿ ಹೇಳಿಕೆ ಪಡೆಯಲಾಗಿತ್ತು. ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ (ಪೋಕ್ಸೊ) ಕಾಯ್ದೆಯಡಿ ಅಪರಾಧಿ ಸರ್ವೇಶ್ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು. ಆತನನ್ನು ಬಂಧಿಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಲಾಗಿತ್ತು. ಪಬ್ಲಿಕ್ ಪ್ರಾಸಿಕ್ಯೂಟರ್ ಕೆ.ವಿ. ಅಶ್ವತ್‌ನಾರಾಯಣಗೌಡ ವಾದಿಸಿದ್ದರು’ ಎಂದೂ ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು