ಯಲಹಂಕ: ಬ್ಯಾಟರಾಯನಪುರ ಕ್ಷೇತ್ರದ ಜಕ್ಕೂರು ಗ್ರಾಮದಲ್ಲಿ ನಿರ್ಮಾಣವಾಗುತ್ತಿರುವ ಸರ್ಕಾರಿ ಶಾಲೆ ಮತ್ತು ಪದವಿ ಕಾಲೇಜು ಕಟ್ಟಡದ ಕಾಮಗಾರಿಯನ್ನು ಕಂದಾಯ ಸಚಿವ ಕೃಷ್ಣ ಬೈರೇಗೌಡ ಪರಿಶೀಲಿಸಿದರು.

‘ಕಟ್ಟಡ ನಿರ್ಮಾಣ ಕಾರಣಕ್ಕೆ ಸರ್ಕಾರಿ ಪ್ರಾಥಮಿಕ ಶಾಲೆಯು ಪ್ರೌಢ ಶಾಲೆ ಕಟ್ಟಡದಲ್ಲಿ ನಡೆಯುತ್ತಿರುವುದರಿಂದ ವಿದ್ಯಾರ್ಥಿಗಳ ಪಾಠಗಳಿಗೆ ತೊಂದರೆಯಾಗಿದೆ. ಕಾಮಗಾರಿ ಪೂರ್ಣಗೊಳಿಸಲು ಇನ್ನೆಷ್ಟು ವರ್ಷಬೇಕು? ಶೀಘ್ರ ಕಾಮಗಾರಿ ಪೂರ್ಣಗೊಳಿಸಿ, ಮಕ್ಕಳಿಗೆ ಅನುಕೂಲ ಮಾಡಿಕೊಡಬೇಕು’ ಎಂದು ಸೂಚಿಸಿದರು.

‘ಮುಂದಿನ ಶೈಕ್ಷಣಿಕ ವರ್ಷದ ಆರಂಭದ ವೇಳೆಗೆ ಪದವಿ ಕಾಲೇಜು ಕಟ್ಟಡದ ನೆಲ ಅಂತಸ್ತು ಮತ್ತು ಮೊದಲನೇ ಮಹಡಿಯ ಒಳಭಾಗದ ಕಾಮಗಾರಿಯನ್ನು ಪೂರ್ಣಗೊಳಿಸಬೇಕು. ಇದರಿಂದ ದಾಖಲಾತಿ ಆರಂಭಿಸಿ, ತರಗತಿಗಳನ್ನು ನಡೆಸಲು ಅನುಕೂಲವಾಗುತ್ತದೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.