ಶನಿವಾರ, ಮೇ 21, 2022
26 °C

ನಗರದ 16 ಕಡೆಗಳಲ್ಲಿ ಜಲಸ್ಪಂದನ ನಾಳೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಜಲಮಂಡಳಿಯು ನಗರದ 16 ಕಡೆಗಳಲ್ಲಿ ಇದೇ 20ರಂದು ಬೆಳಿಗ್ಗೆ 10ರಿಂದ ಮಧ್ಯಾಹ್ನ 1ರವರೆಗೆ ಜಲಸ್ಪಂದನ ಕಾರ್ಯಕ್ರಮ ಹಮ್ಮಿಕೊಂಡಿದೆ.

ಮಂಡಳಿಯ ಪ್ರಧಾನ ಮುಖ್ಯ ಎಂಜಿನಿಯರ್‌ ಮತ್ತು ಹೆಚ್ಚುವರಿ ಮುಖ್ಯ ಎಂಜಿನಿಯರ್‌ಗಳ ನೇತೃತ್ವದಲ್ಲಿ ಸಂವಾದ ನಡೆಯಲಿದೆ.

ಬಳಕೆದಾರರು ನೀರು ಪೂರೈಕೆಗೆ ಸಂಬಂಧಿಸಿದ ದೂರುಗಳನ್ನು ಅಧಿಕಾರಿಗಳ ಗಮನಕ್ಕೆ ತರಬಹುದು. ಜಲಸ್ಪಂದನ ನಡೆಯುವ ಸ್ಥಳಗಳ ಬಗ್ಗೆ ಮಾಹಿತಿಗೆ ಮಂಡಳಿಯ ವೆಬ್‌ಸೈಟ್‌ www.bwssb.gov.in ಸಂಪರ್ಕಿಸಬಹುದು.

ಮಂಡಳಿಯ 24/7 ದೂರು ನಿರ್ವಹಣಾ ಕೇಂದ್ರದ ದೂರವಾಣಿ ಸಂಖ್ಯೆ ಸಂಖ್ಯೆ:22238888, ಸಹಾಯವಾಣಿ 1916 ಹಾಗೂ ವಾಟ್ಸ್‌ಆ್ಯಪ್‌  87622–28888 ಸಂಪರ್ಕಿಸಬಹುದಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.