ಮಾದಿಗ ಸಮುದಾಯಕ್ಕೆ ರಾಜಕೀಯ ಅವಕಾಶ ಬೇಕು: ಎಲ್.ಹನುಮಂತಯ್ಯ

ಬೆಂಗಳೂರು: ಬಿಬಿಎಂಪಿ ಸೇರಿ ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಮಾದಿಗ ಸಮುದಾಯದ ಅಭ್ಯರ್ಥಿಗಳನ್ನು ಗೆಲ್ಲಿಸಲು ಎಲ್ಲರೂ ಶ್ರಮ ವಹಿಸಬೇಕು ಎಂದು ರಾಜ್ಯಸಭೆ ಸದಸ್ಯ ಎಲ್.ಹನುಮಂತಯ್ಯ ತಿಳಿಸಿದರು.
ಜಾಂಬವ ಜಾಗೃತಿ ವೇದಿಕೆ ಆಯೋಜಿಸಿದ್ದ ‘ಮಾದಿಗ ಸಮುದಾಯದ ಮುಂದಿನ ರಾಜಕೀಯ ನಡೆ’ ಕುರಿತ ಸಭೆಯಲ್ಲಿ ಮಾತನಾಡಿದ ಅವರು, ‘ಬಿಬಿಎಂಪಿ, ಜಿಲ್ಲಾ ಪಂಚಾಯಿತಿ ಮತ್ತು ತಾಲ್ಲೂಕು ಪಂಚಾಯಿತಿ ಚುನಾವಣೆಗಳಲ್ಲಿ ಸಮುದಾಯದವರು ಹೆಚ್ಚಾಗಿ ಸ್ಪರ್ಧಿಸಬೇಕು. ಅದಕ್ಕೆ ಅಗತ್ಯ ಇರುವ ಅವಕಾಶಗಳನ್ನು ಎಲ್ಲರೂ ಸೇರಿ ಕೊಡಿಸಬೇಕು. ಆಯಾ ಕ್ಷೇತ್ರದ ಶಾಸಕರು ಮತ್ತು ಎಲ್ಲಾ ಜನಪ್ರತಿನಿಧಿಗಳನ್ನು ವಿಶ್ವಾಸಕ್ಕೆ ಪಡೆದು ಗೆಲ್ಲಿಸಲು ಮುಂದಾಗಬೇಕು’ ಎಂದು ಹೇಳಿದರು.
ವಿಧಾನ ಪರಿಷತ್ತಿನ ಸದಸ್ಯ ಆರ್.ಬಿ. ತಿಮ್ಮಾಪುರ, ‘ರಾಜಕೀಯ ಅಧಿಕಾರ ಪಡೆದುಕೊಳ್ಳಲು ಎಲ್ಲರೂ ಒಟ್ಟಾಗಿ ಹೋರಾಟ ಮಾಡಬೇಕಾದ ಅನಿವಾರ್ಯತೆ ಇದೆ’ ಎಂದು ಹೇಳಿದರು.
ವಿಧಾನ ಪರಿಷತ್ ಸದಸ್ಯ ಡಾ.ತಿಮ್ಮಯ್ಯ, ಮುಖಂಡರಾದ ಆರ್.ಧರ್ಮಸೇನಾ, ಜಿ.ಎಸ್. ಮಂಜುನಾಥ್, ಬಲದೇವಕೃಷ್ಣ, ವೇದಿಕೆ ಅಧ್ಯಕ್ಷ ಎನ್.ಕೃಷ್ಣಮೂರ್ತಿ, ಪ್ರಧಾನ ಕಾರ್ಯದರ್ಶಿ ಆರ್.ಅಶೋಕ್, ಕಾರ್ಯದರ್ಶಿ ನರಸಿಂಹಮೂರ್ತಿ ಪಾಲ್ಗೊಂಡಿದ್ದರು. ಚುನಾವಣೆಯಲ್ಲಿ ಸ್ಪರ್ಧಿಸಲು ಆಸಕ್ತರಾಗಿದ್ದ ಬೆಂಗಳೂರಿನ 20ಕ್ಕೂ ಹೆಚ್ಚು ಮುಖಂಡರು ಭಾಗವಹಿಸಿದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.