ಬೆಂಗಳೂರು: ಹಾವೇರಿ ಜಿಲ್ಲೆಯಲ್ಲಿರುವ ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ಬೋಧಕ ಹಾಗೂ ಬೋಧಕೇತರರ ಹುದ್ದೆಗಳ ಭರ್ತಿಗೆ ನೀಡಿದ್ದ ಅನುಮತಿಯನ್ನು ಉನ್ನತ ಶಿಕ್ಷಣ ಇಲಾಖೆ ತಾತ್ಕಾಲಿಕವಾಗಿ ಹಿಂಪಡೆದಿದೆ.

ವಿವಿಧ ಹುದ್ದೆಗಳ ಕಾಯಂ ನೇಮಕಾತಿ ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ. ವಿಶ್ವವಿದ್ಯಾಲಯ ನಿಯಮಗಳನ್ನು ಗಾಳಿಗೆ ತೂರಿ ನೇಮಕಾತಿ ಮಾಡುತ್ತಿದೆ ಎಂದು ಜಾನಪದ ವಿಶ್ವವಿದ್ಯಾಲಯದ ಸರ್ವಾಂಗೀಣ ಹಿತರಕ್ಷಣಾ ಟ್ರಸ್ಟ್ ಹಾಗೂ ಇತರರು ದೂರು ಸಲ್ಲಿಸಿದ್ದರು.

ದೂರುಗಳ ಸತ್ಯಾಸತ್ಯತೆ ಪರಿಶೀಲಿಸಲು ಸರ್ಕಾರ ನಿರ್ಧರಿಸಿದ್ದು, ದೂರುಗಳಲ್ಲಿನ ಆರೋಪಗಳನ್ನು ಪರಿಶೀಲಿಸಿ ವಿಸ್ತೃತ ವರದಿ ಸಲ್ಲಿಸಲು ವಿಶ್ವವಿದ್ಯಾಲಯದ ಕುಲಸಚಿವರಿಗೆ ಮೂರು ದಿನಗಳ ಗಡುವು ನೀಡಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.