ಗುರುವಾರ, 22 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ರಾಜ್ಯಾಧ್ಯಕ್ಷ ಜನಾರ್ದನ ರೆಡ್ಡಿ ಅಧಿಕಾರ ಸ್ವೀಕಾರ

Published 25 ನವೆಂಬರ್ 2023, 8:01 IST
Last Updated 25 ನವೆಂಬರ್ 2023, 8:01 IST
ಅಕ್ಷರ ಗಾತ್ರ

ಬೆಂಗಳೂರು: ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ರಾಜ್ಯ ಅಧ್ಯಕ್ಷರಾಗಿ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ಅವರು ನಗರದಲ್ಲಿ ಶನಿವಾರ ನಡೆದ ಸಮಾರಂಭದಲ್ಲಿ ಅಧಿಕಾರ ಸ್ವೀಕರಿಸಿದರು.

ಹಿಂದಿನ ಅಧ್ಯಕ್ಷರಾದ ಜೆ.ರಾಮಣ್ಣ ಅವರಿಂದ ಅಧಿಕಾರ ಸ್ವೀಕರಿಸಿದರು. ಇದೇ ವೇಳೆ ರಾಜ್ಯ ಉಪಾಧ್ಯಕ್ಷರಾಗಿ, ಜಿಲ್ಲಾ ಉಸ್ತುವಾರಿಗಳಿಗೆ ನೇಮಕಾತಿ ಪತ್ರ ವಿತರಣೆ ಮಾಡಲಾಯಿತು.

ಬಳಿಕ ಮಾತನಾಡಿದ ರೆಡ್ಡಿ ಅವರು, ಮುಂದಿನ ಲೋಕಸಭಾ ಚುನಾವಣೆಯಲ್ಲಿ ಎರಡರಿಂದ ಆರು ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡುತ್ತೇವೆ. ಇದಕ್ಕಾಗಿಯೇ ಹತ್ತು ಕ್ಷೇತ್ರದಲ್ಲಿ ಪ್ರವಾಸ ಮಾಡಿ ಕ್ಷೇತ್ರದ ಸ್ಥಿತಿಗತಿ ಅರಿಯಲಾಗುವುದು ಎಂದರು.

ಸಚಿವ ನಾಗೇಂದ್ರ ಅವರಿಗೆ ಒಂದು ನ್ಯಾಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಒಂದು ನ್ಯಾಯವೇ? ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿದಂತೆ ನಾಗೇಂದ್ರ ಅವರ ಮೇಲೂ 25ಕ್ಕೂ ಹೆಚ್ಚು ಪ್ರಕರಣಗಳಿವೆ. ಅವುಗಳನ್ನೂ ಮುಖ್ಯಮಂತ್ರಿ ಸಿದ್ದರಾಮಯ್ಯ ವಾಪಸ್ ಪಡೆಯಲಿ. ಬೆಳಗಾವಿ ಅಧಿವೇಶನದಲ್ಲಿ ಈ ವಿಚಾರ ಪ್ರಸ್ತಾಪಿಸುತ್ತೇನೆ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT