ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜನಾರ್ದನ ರೆಡ್ಡಿ ಪಾಸ್‌ಪೋರ್ಟ್‌ ನವೀಕರಣಕ್ಕೆ ಒಪ್ಪಿಗೆ

Last Updated 28 ಏಪ್ರಿಲ್ 2022, 19:39 IST
ಅಕ್ಷರ ಗಾತ್ರ

ಬೆಂಗಳೂರು: ಕಬ್ಬಿಣದ ಅದಿರನ್ನು ಅಕ್ರಮವಾಗಿ ಮಾರಾಟ ಮಾಡಿದ ಮತ್ತು ರಾಜ್ಯದ ಬೊಕ್ಕಸಕ್ಕೆ ನಷ್ಟ ಎಸಗಿದ ಆರೋಪ ಎದುರಿಸುತ್ತಿರುವ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಪಾಸ್‌ಪೋರ್ಟ್‌ ನವೀಕರಣಕ್ಕೆ ಜನಪ್ರತಿನಿಧಿಗಳ ನ್ಯಾಯಾಲಯ ಅನುಮತಿ ನೀಡಿದೆ.

ಈ ಕುರಿತಂತೆ ಜನಾರ್ದನ ರೆಡ್ಡಿ ಸಲ್ಲಿಸಿದ್ದ ಮನವಿಯನ್ನು ‘ಶಾಸಕರು–ಸಂಸದರ ವಿರುದ್ಧದ ಕ್ರಿಮಿನಲ್‌ ಪ್ರಕರಣಗಳ ವಿಚಾರಣೆ’ಯ ವಿಶೇಷ ನ್ಯಾಯಾಲಯದ ನ್ಯಾಯಾಧೀಶೆ
ಪ್ರೀತ್‌ ಜೆ ವಿಚಾರಣೆ ನಡೆಸಿ ಈ ಕುರಿತಂತೆ ಆದೇಶಿಸಿದ್ದಾರೆ.

‘ಆರೋಪಿಯು ಈ ಹಿಂದೆ ಈ ನ್ಯಾಯಾಲಯದ ಆದೇಶಗಳನ್ನು ಉಲ್ಲಂಘಿಸಿಲ್ಲ. ಹೈದರಾಬಾದ್‌ನಲ್ಲಿನ ಸಿಬಿಐ ಪ್ರಕರಣಗಳ ವಿಚಾರಣೆಗಾಗಿಸ್ಥಾಪಿಸಲಾಗಿರುವ ವಿಶೇಷ ನ್ಯಾಯಾಲಯದ ಪ್ರಧಾನ ನ್ಯಾಯಾಧೀಶರು ನವೀಕರಣಕ್ಕಾಗಿ ರೆಡ್ಡಿ ಅವರ ಪಾಸ್‌ಪೋರ್ಟ್‌ ಹಿಂದಿರುಗಿಸಿದ್ದಾರೆ. ಹೀಗಾಗಿ, ಆರೋಪಿಯ ಮನವಿಯನ್ನು ಸಮ್ಮತಿಸಲಾಗಿದೆ’ ಎಂದು ನ್ಯಾಯಾಧೀಶರು ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT