ಭಾನುವಾರ, ನವೆಂಬರ್ 28, 2021
19 °C

ಪೊಲೀಸರ ಜನಸಂಪರ್ಕ ಸಭೆ ಇಂದು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಜನರ ಸಮಸ್ಯೆ ಆಲಿಸಲು ನಗರದ ಪೊಲೀಸರು ಇಂದು (ಅ. 23) ಹಲವೆಡೆ ‘ಮಾಸಿಕ ಜನಸಂಪರ್ಕ’ ಸಭೆ ಆಯೋಜಿಸಿದ್ದಾರೆ.

ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಸಭೆ ನಡೆಯಲಿದೆ. ಪೊಲೀಸ್ ಇಲಾಖೆಗೆ ಸಂಬಂಧಪಟ್ಟ ಯಾವುದೇ ಸಮಸ್ಯೆಗಳು ಇದ್ದರೆ ಸಾರ್ವಜನಿಕರು ಸಭೆಯಲ್ಲಿ ಪ್ರಸ್ತಾಪಿಸಬಹುದು.

ವೈಯಾಲಿಕಾವಲ್ ಠಾಣೆಯಲ್ಲಿ ಕಮಿಷನರ್ ಕಮಲ್ ಪಂತ್, ಎಲೆಕ್ಟ್ರಾನಿಕ್ ಸಿಟಿ ಠಾಣೆಯಲ್ಲಿ ಹೆಚ್ಚುವರಿ ಪೊಲೀಸ್ ಕಮಿಷನರ್ ಎಸ್‌.ಮರುಗನ್, ಸಂಜಯನಗರ ಠಾಣೆಯಲ್ಲಿ ಹೆಚ್ಚುವರಿ ‍ಪೊಲೀಸ್ ಕಮಿಷನರ್ ಸೌಮೇಂದು ಮುಖರ್ಜಿ, ಚಾಮರಾಜಪೇಟೆಯ ಸಿಸಿಬಿ ಕಚೇರಿಯಲ್ಲಿ ಜಂಟಿ ಕಮಿಷನರ್ ಸಂದೀಪ್ ಪಾಟೀಲ ಹಾಗೂ ಹೆಣ್ಣೂರು ಠಾಣೆಯಲ್ಲಿ ಡಿಸಿಪಿ ಶರಣಪ್ಪ ನೇತೃತ್ವದಲ್ಲಿ ಸಭೆ ನಡೆಯಲಿದೆ.

‘ಜನರ ಸಮಸ್ಯೆ ಇತ್ಯರ್ಥಪಡಿಸಿ ಜನಸ್ನೇಹಿ ಪೊಲೀಸ್ ವ್ಯವಸ್ಥೆ ರೂಪಿಸಲು ಮಾಸಿಕ ಜನಸಂಪರ್ಕ ಸಭೆ ಆಯೋಜಿಸಲಾಗಿದೆ. ಎಲ್ಲ ಡಿಸಿಪಿ, ಎಸಿಪಿ ಹಾಗೂ ಇನ್‌ಸ್ಪೆಕ್ಟರ್‌ಗಳು ಸಭೆಯಲ್ಲಿ ಹಾಜರಿರಲಿದ್ದಾರೆ’ ಎಂದು ಕಮಲ್ ಪಂತ್ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು