ಗುರುವಾರ , ಆಗಸ್ಟ್ 11, 2022
21 °C

ಗೋವಿಂದರಾಜನಗರದಲ್ಲಿ ಜನಸ್ಪಂದನಾ ಪಾದಯಾತ್ರೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಗೋವಿಂದರಾಜನಗರ ಕ್ಷೇತ್ರದ ವ್ಯಾಪ್ತಿಯಲ್ಲಿ ಸಚಿವ ವಿ. ಸೋಮಣ್ಣ ಜನಸ್ಪಂದನಾ ಪಾದಯಾತ್ರೆ ಹಮ್ಮಿಕೊಂಡಿದ್ದರು. ಈ ಸಂದರ್ಭದಲ್ಲಿ ಹಲವು ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಿದರು.

‘ಬಾಲಗಂಗಾಧರನಾಥ ಸ್ವಾಮೀಜಿಯವರ ಹಳೆಯ ಪ್ರತಿಮೆ ತೆರವುಗೊಳಿಸಿ ಕಂಚಿನ ಪುತ್ಥಳಿಯನ್ನು ಪ್ರತಿಷ್ಠಾಪಿಸಲಾಗುತ್ತಿದೆ. ಹಟ್ಟಿ ಮಾರಮ್ಮ ದೇವಸ್ಥಾನವನ್ನು ನವೀಕರಣಗೊಳಿಸಲಾಗುತ್ತಿದೆ’ ಎಂದು ಸೋಮಣ್ಣ ಹೇಳಿದರು.

ನಾಗರಭಾವಿ ಮುಖ್ಯರಸ್ತೆ ಮತ್ತು ಪ್ರಶಾಂತ ನಗರ ರಸ್ತೆಗಳಿಗೆ ಡಾಂಬರೀಕರಣ ಕಾಮಗಾರಿಗೆ ಚಾಲನೆ ನೀಡಿದ ಅವರು, ಅಂಗವಿಕಲರಿಗೆ ತ್ರಿಚಕ್ರ ವಾಹನ ವಿತರಿಸಿದರು.

ಗೋವಿಂದರಾಜ ನಗರ ವಾರ್ಡ್‌ನ ಕೆಲವು ಹೋಟೆಲುಗಳಲ್ಲಿ ಸಾರ್ವಜನಿಕರ ಜೊತೆ ಕಾಫಿ ಸವಿಯುತ್ತ ಅವರ ಸಮಸ್ಯೆಗಳನ್ನು ಆಲಿಸಿದರು. 

ಆದಿಚುಂಚನಗಿರಿ ಶಾಖಾ ಮಠದ ಸೌಮ್ಯನಾಥ ಸ್ವಾಮೀಜಿ ಹಾಗೂ ಪಕ್ಷದ ಸ್ಥಳೀಯ ಮುಖಂಡರಾದ ಕೆ. ಉಮೇಶ್‌ ಶೆಟ್ಟಿ, ವಿಶ್ವನಾಥಗೌಡ, ಉಮಾಶಂಕರ್, ರಮೇಶ್, ರಾಮಚಂದ್ರ, ಬಿಬಿಎಂಪಿ ಹಾಗೂ ಬೆಸ್ಕಾಂ ಅಧಿಕಾರಿಗಳು ಹಾಜರಿದ್ದರು. 

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು