ಬೆಂಗಳೂರು: ನೀವು ಯಶವಂತಪುರ ವಿಧಾನಸಭಾ ಕ್ಷೇತ್ರ ದ ನಿವಾಸಿಯೇ? ನಿಮ್ಮ ಮನೆಗೆ ಕುಡಿಯುವ ನೀರು ಸಮರ್ಪಕವಾಗಿ ಪೂರೈಕೆ ಆಗುತ್ತಿಲ್ಲವೇ? ವಾರ್ಡ್‌ನ ರಸ್ತೆಗಳು ಗುಂಡಿ ಬಿದ್ದಿವೆಯೇ? ಉದ್ಯಾನದ ನಿರ್ವಹಣೆ ಸಮರ್ಪಕವಾಗಿ ಆಗುತ್ತಿಲ್ಲವೇ... ನಿಮ್ಮ ಕ್ಷೇತ್ರದ ಇಂತಹ ಸಮಸ್ಯೆಗಳಿಗೆ ಪರಿಹಾರ ಕಂಡು ಕೊಳ್ಳಬೇಕೇ? ಹಾಗಾದರೆ, ಕೆಂಗೇರಿ ಉಪನಗರದ ಬಂಡೆಮಠ ಮದುವೆ ಹಾಲ್‌ಗೆ ಇದೇ 21 ರಂದು ಬನ್ನಿ.

ಯಶವಂತಪುರ ವಿಧಾನಸಭಾ ಕ್ಷೇತ್ರದ ಜನರ ಅಹವಾಲು ಆಲಿಸುವ ಸಲುವಾಗಿ ‘ಪ್ರಜಾವಾಣಿ– ಡೆಕ್ಕನ್ ಹೆರಾಲ್ಡ್’ ಪತ್ರಿಕೆಗಳ ವತಿಯಿಂದ ಶನಿ ವಾರ (ಇದೇ 21) ಇಲ್ಲಿ ‘ಜನಸ್ಪಂದನ’ ಕಾರ್ಯಕ್ರಮ ಏರ್ಪಡಿಸಲಾಗಿದೆ.

ಈ ಕ್ಷೇತ್ರದ ಶಾಸಕರೂ ಆಗಿರುವ ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಹಾಗೂ ಬಿಬಿಎಂಪಿ, ಜಲಮಂಡಳಿ, ಬಿಡಿಎ, ಬೆಸ್ಕಾಂ, ಪೊಲೀಸ್ ಇಲಾಖೆಗಳ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿ ಸಾರ್ವಜನಿಕರ ಅಹವಾಲು ಆಲಿಸಲಿದ್ದಾರೆ. ಈ ಕ್ಷೇತ್ರದ ನಿವಾಸಿಗಳು ಸ್ಥಳೀಯ ಸಮಸ್ಯೆಗಳನ್ನು ನೇರವಾಗಿ ಶಾಸಕರ ಹಾಗೂ ಅಧಿಕಾರಿಗಳ ಗಮನಕ್ಕೆ ತಂದು ಬಗೆಹರಿಸಿಕೊಳ್ಳಬಹುದು.

ಆಸಕ್ತರು ಬೆಳಿಗ್ಗೆ 10ರಿಂದ ಸ್ಥಳದಲ್ಲೇ ಹೆಸರು ನೋಂದಾಯಿಸಬಹುದು. ಮೊದಲು ನೋಂದಣಿ ಮಾಡಿಸಿದವರಿಗೆ ಆದ್ಯತೆ.
ಬೆಳಿಗ್ಗೆ 11ರಿಂದ ಮಧ್ಯಾಹ್ನ 2 ಗಂಟೆವರೆಗೆ ಕಾರ್ಯಕ್ರಮ ನಡೆಯಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.