ಬೆಂಗಳೂರು: ರಾಜ್ಯದ 29 ಜಿಲ್ಲೆಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಸೋಮವಾರ ನಡೆಸಿದ ಜನತಾ ದರ್ಶನದಲ್ಲಿ ಒಟ್ಟು 6,684 ಅಹವಾಲುಗಳು ಸಲ್ಲಿಕೆಯಾಗಿವೆ. 21 ಅಹವಾಲುಗಳಿಗೆ ಸ್ಥಳದಲ್ಲೇ ಪರಿಹಾರ ಒದಗಿಸಲಾಗಿದೆ.

‘ಗದಗ ಮತ್ತು ಬೆಳಗಾವಿ ಹೊರತುಪಡಿಸಿ ಉಳಿದ ಎಲ್ಲ ಜಿಲ್ಲೆಗಳಲ್ಲೂ ಜನತಾ ದರ್ಶನ ನಡೆಸಲಾಗಿದೆ. ಕಂದಾಯ ಇಲಾಖೆಗೆ ಸಂಬಂಧಿಸಿದಂತೆ ಅತ್ಯಧಿಕ 2,100 ಅಹವಾಲುಗಳು ಬಂದಿವೆ. ನಂತರದ ಸ್ಥಾನದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ನಗರಾಭಿವೃದ್ಧಿ ಇಲಾಖೆಗಳಿವೆ. ಒಟ್ಟು 6,663 ಅಹವಾಲುಗಳನ್ನು ವಿಲೇವಾರಿಗಾಗಿ ವಿವಿಧ ಇಲಾಖೆಗಳಿಗೆ ರವಾನಿಸಲಾಗಿದೆ’ ಎಂದು ಮುಖ್ಯಮಂತ್ರಿಯವರ ಸಚಿವಾಲಯದ ಪ್ರಕಟಣೆ ತಿಳಿಸಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೂಚನೆಯಂತೆ ಪ್ರತಿ ತಿಂಗಳ 25ರಂದು ಎಲ್ಲ ಜಿಲ್ಲೆಗಳಲ್ಲೂ ಆಯಾ ಜಿಲ್ಲಾ ಉಸ್ತುವಾರಿ ಸಚಿವರು ಜನತಾ ದರ್ಶನ ನಡೆಸಲಿದ್ದಾರೆ. ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೇರಿದಂತೆ ಹಿರಿಯ ಅಧಿಕಾರಿಗಳು ಸಭೆಯಲ್ಲಿದ್ದು ಜನರ ಅಹವಾಲು ಇತ್ಯರ್ಥಕ್ಕೆ ಕ್ರಮ ಕೈಗೊಳ್ಳುವ ಹೊಸ ಕಾರ್ಯಕ್ರಮ ಸೋಮವಾರದಿಂದ ಜಾರಿಗೆ ಬಂದಿದೆ.

774 ಅಹವಾಲುಗಳೊಂದಿಗೆ ಹಾವೇರಿ ಜಿಲ್ಲೆ ಮೊದಲ ಸ್ಥಾನದಲ್ಲಿದೆ. ನಂತರದ ಸ್ಥಾನಗಳಲ್ಲಿ ಹಾಸನ (432) ಮತ್ತು ಕೋಲಾರ (423) ಜಿಲ್ಲೆಗಳಿವೆ. ಲಿಖಿತ ರೂಪದ ಅಹವಾಲುಗಳನ್ನು ಸ್ವೀಕರಿಸಿ, ದಾಖಲಿಸಿಕೊಳ್ಳಲಾಗಿದೆ. ಪರಿಹಾರಕ್ಕಾಗಿ ಸಂಬಂಧಿಸಿದ ಇಲಾಖೆಗಳಿಗೆ ರವಾನಿಸಲಾಗಿದೆ. ಮೌಖಿಕ ಅಹವಾಲುಗಳನ್ನೂ ಆಲಿಸಿ ಪರಿಹಾರ ಒದಗಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿಯವರ ಸಚಿವಾಲಯ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.