ಸ್ವಾರ್ಥ ಬದಿಗಿಡಿ, ಸಂಘಟನೆ ಬಲಪಡಿಸಿ: ಜಯ ಕರ್ನಾಟಕ ಸಂಘಟನೆಯ ಜಗದೀಶ್ ಕರೆ

7

ಸ್ವಾರ್ಥ ಬದಿಗಿಡಿ, ಸಂಘಟನೆ ಬಲಪಡಿಸಿ: ಜಯ ಕರ್ನಾಟಕ ಸಂಘಟನೆಯ ಜಗದೀಶ್ ಕರೆ

Published:
Updated:

ಬೆಂಗಳೂರು: ಸ್ವಾರ್ಥವನ್ನು ಬದಿಗಿಟ್ಟು ಸಂಘಟನೆಯನ್ನು ಬಲಪಡಿಸುವ ನಿಟ್ಟಿನಲ್ಲಿ ಎಲ್ಲರೂ ಒಗ್ಗಟ್ಟಿನಿಂದ ದುಡಿಯಬೇಕು ಎಂದು ಜಯ ಕರ್ನಾಟಕ ಸಂಘಟನೆಯ ನಗರ ಘಟಕದ ಅಧ್ಯಕ್ಷ ಜಗದೀಶ್ ಪದಾಧಿಕಾರಿಗಳಿಗೆ ಸಲಹೆ ನೀಡಿದರು.

ಕೆ.ಆರ್.ಪುರದಲ್ಲಿ ಜಯ ಕರ್ನಾಟಕ ಸಂಘಟನೆ ಆಯೋಜಿಸಿದ್ದ ಮಾಸಿಕ ಸಭೆ ಹಾಗೂ ನೂತನ ಪದಾಧಿಕಾರಿಗಳ ಅಯ್ಕೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಸತತ ಹತ್ತು ವರ್ಷಗಳಿಂದ ಸಂಘಟನೆ ಉತ್ತಮ ರೀತಿಯಲ್ಲಿ ಸಮಾಜಮುಖಿ ಕಾರ್ಯಗಳನ್ನು ಮಾಡುತ್ತಿದೆ. ಈಗಾಗಲೇ 40 ಲಕ್ಷ ಕಾರ್ಯಕರ್ತರನ್ನು ಹೊಂದಿದೆ. ಕ್ಷೇತ್ರದಲ್ಲಿ ಸಂಘಟನೆ ಸಾಮಾಜಿಕ ನ್ಯಾಯದಲ್ಲಿ ಗುರುತಿಸಿಕೊಳ್ಳದಿದ್ದರೆ ಅಧ್ಯಕ್ಷ ಹಾಗೂ ಪದಾಧಿಕಾರಿಗಳನ್ನು ಬದಲಾವಣೆ ಮಾಡಲಾಗುವುದು’ ಎಂದು ಎಚ್ಚರಿಸಿದರು.

‘ಸಂಘಟನೆಯಲ್ಲಿ ಪಾರದರ್ಶಕತೆ ಕಾಪಾಡಿಕೊಳ್ಳಬೇಕು. ಸಂಘಟನೆಗೆ ಕಪ್ಪು ಚುಕ್ಕೆ ತರುವಂತಹ ಹಾಗೂ ಹಣ ವಸೂಲಿ ಇನ್ನಿತರ ಚಟುವಟಿಕೆಗಳಲ್ಲಿ ಕಾಣಸಿಕೊಂಡರೆ ಶಿಸ್ತು ಕ್ರಮ ಜರಗಿಸಲಾಗುವುದು’ ಎಂದರು.

ಕ್ಷೇತ್ರದ ವಾರ್ಡಗಳ ನೂತನ ಅಧ್ಯಕ್ಷ ಮತ್ತು ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಕೆ.ಆರ್.ಪುರ ಕ್ಷೇತ್ರದ ಅದ್ಯಕ್ಷ ಕಲ್ಕೆರೆ ಜಿ.ಮಾದೇಶ ಗೌಡ, ನಗರ ಕಾರ್ಯಾಧ್ಯಕ್ಷ ಶ್ರೀನಿವಾಸ, ಪ್ರಧಾನ ಕಾರ್ಯದರ್ಶಿ ವಿವೇಕ ಇದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !