ಗುರುವಾರ, 12 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಜಯದೇವ: ಆಂಜಿಯೋಪ್ಲಾಸ್ಟಿ ಕಾರ್ಯಾಗಾರ ಇದೇ 24ರಿಂದ

Published 3 ಸೆಪ್ಟೆಂಬರ್ 2024, 16:10 IST
Last Updated 3 ಸೆಪ್ಟೆಂಬರ್ 2024, 16:10 IST
ಅಕ್ಷರ ಗಾತ್ರ

ಬೆಂಗಳೂರು: ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ವತಿಯಿಂದ 150 ಮಂದಿಗೆ ಉಚಿತ ಸ್ಟೆಂಟ್‌ ಅಳವಡಿಸುವ ಆಂಜಿಯೋಪ್ಲಾಸ್ಟಿ ಕಾರ್ಯಾಗಾರವನ್ನು ಇದೇ 24ರಿಂದ 28 ರವರೆಗೆ ಹಮ್ಮಿಕೊಳ್ಳಲಾಗಿದೆ.

ಡಾ.ಗೋವಿಂದರಾಜು ಸುಬ್ರಮಣಿ ಹಾರ್ಟ್ ಫೌಂಡೇಷನ್ ಹಾಗೂ ಅಮೆರಿಕದ ಮೆಡ್‌ಟ್ರಾನಿಕ್ಸ್ ಸಂಸ್ಥೆಯ ಸಹಯೋಗದಲ್ಲಿ ಈ ಕಾರ್ಯಾಗಾರ ನಡೆಯಲಿದೆ. ಸೆ.24 ಹಾಗೂ ಸೆ.25ರಂದು ಸಂಸ್ಥೆಯ ಮೈಸೂರು ಶಾಖೆ, ಸೆ.26ರಿಂದ ಸೆ.28ರವರೆಗೆ ಬೆಂಗಳೂರಿನ ಸಂಸ್ಥೆಯ ಆವರದಲ್ಲಿ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ. 

‘ಬಡ ರೋಗಿಗಳು ಹಾಗೂ ಬಡತನ ರೇಖೆಗಿಂತ ಕೆಳಗಿರುವ (ಬಿಪಿಎಲ್) ಕುಟುಂಬಗಳ ಹಿರಿಯ ನಾಗರಿಕರಿಗಾಗಿ ಈ ಕಾರ್ಯಾಗಾರ ಆಯೋಜಿಸಲಾಗಿದೆ. ಪ್ರತಿ ರೋಗಿಗೂ ಉನ್ನತಮಟ್ಟದ ಸ್ಟೆಂಟ್‌ಗಳನ್ನು ಉಚಿತವಾಗಿ ಅಳವಡಿಸಲಾಗುತ್ತದೆ. ಈಗಾಗಲೇ ಆ್ಯಂಜಿಯೋಗ್ರಾಂ ತಪಾಸಣೆಗೆ ಒಳಪಟ್ಟ ರೋಗಿಗಳು ಈ ಸೌಲಭ್ಯ ಪಡೆಯಬಹುದು. ರೋಗಿಗಳು ದಾಖಲಾತಿ ಸಂದರ್ಭದಲ್ಲಿ ಬಿಪಿಎಲ್‌ ಕಾರ್ಡ್‌ ಅಥವಾ ಆದಾಯ ಪ್ರಮಾಣ ಪತ್ರ ಹೊಂದಿರಬೇಕು. ಅರ್ಹರು ಸೆ.21ರೊಳಗೆ ಕಚೇರಿಯಲ್ಲಿ ಹೆಸರು ನೋಂದಾಯಿಸಿಕೊಳ್ಳಬೇಕು’ ಎಂದು ಸಂಸ್ಥೆಯ ನಿರ್ದೇಶಕ ಡಾ.ಕೆ.ಎಸ್. ರವೀಂದ್ರನಾಥ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

‌ಸಂಪರ್ಕಕ್ಕೆ: ನಿರ್ದೇಶಕರ ಕಚೇರಿ, ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ, ಬನ್ನೇರುಘಟ್ಟ ರಸ್ತೆ, ಜಯನಗರ 9ನೇ ಬ್ಲಾಕ್.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT