ಬೆಂಗಳೂರು: ‘ನನ್ನ ವಿರುದ್ಧ ಸುಳ್ಳು ಸುದ್ದಿ ಹಬ್ಬಿಸಲಾಗುತ್ತಿದ್ದು, ಈ ಕೃತ್ಯದಲ್ಲಿ ಭಾಗಿಯಾಗಿರುವವರನ್ನು ಪತ್ತೆ ಮಾಡಿ ಕಾನೂನು ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಪ್ರಭಾರ ಕುಲಪತಿ ಡಾ. ಜಯಕರ್ ಶೆಟ್ಟಿ ಅವರು ಪೊಲೀಸರಿಗೆ ದೂರು ನೀಡಿದ್ದಾರೆ.

ಅಪರಿಚಿತರ ವಿರುದ್ಧ ದಕ್ಷಿಣ ವಿಭಾಗ ಸೈಬರ್ ಕ್ರೈಂ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

‘ಜಯಕರ್ ಅವರು ಭ್ರಷ್ಟಾಚಾರದಲ್ಲಿ ತೊಡಗಿದ್ದು, ಅವರ ವಿರುದ್ಧ ಸಿಬಿಐ ಕಚೇರಿಯಲ್ಲಿ ದೂರು ದಾಖಲಾಗಿದೆ. ಸರ್ಕಾರವು ನಿಯಮಬಾಹಿರವಾಗಿ ಅವರನ್ನು ಪ್ರಭಾರ ಕುಲಪತಿ ಹುದ್ದೆಗೆ ನೇಮಕ ಮಾಡಿದೆ ಎಂದು ಸುಳ್ಳು ಸುದ್ದಿಗಳನ್ನು ಹಬ್ಬಿಸಲಾಗಿದೆ. ಸಾಮಾಜಿಕ ಜಾಲತಾಣದಲ್ಲೂ ಪೋಸ್ಟ್‌ಗಳನ್ನು ಪ್ರಕಟಿಸಲಾಗಿದೆ. ಈ ಸಂಗತಿ ದೂರಿನಲ್ಲಿದೆ’ ಎಂದು ಪೊಲೀಸರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.