ಬೆಂಗಳೂರು: ಜಯನಗರ 4ನೇ ಬ್ಲಾಕ್ನಲ್ಲಿರುವ ಪಾಲಿಕೆ ವಾಣಿಜ್ಯ ಸಂಕೀರ್ಣದ 1 ಮತ್ತು 2ನೇ ಮಹಡಿಯಲ್ಲಿ ಅಗ್ನಿ ಅವಘಡದ ವೇಳೆ ಲಿಫ್ಟ್ ಒಳಗೆ ಸಿಲುಕಿದ್ದ ಇಬ್ಬರನ್ನು ಅಗ್ನಿಶಾಮಕ ಸಿಬ್ಬಂದಿ ರಕ್ಷಿಸಿದ್ದಾರೆ.

ಸೋಮವಾರ ಬೆಳಿಗ್ಗೆ 10 ಗಂಟೆ ಸಮಯದಲ್ಲಿ ಶಾರ್ಟ್ ಸರ್ಕಿಟ್ನಿಂದಾಗಿ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣವೇ ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿ, ಬಹುಮಹಡಿ ಕಟ್ಟಡದ ವಿದ್ಯುತ್ ಸಂಪರ್ಕ ಕಡಿತಗೊಳಿಸಿದರು. ಲಿಫ್ಟ್ನಲ್ಲಿ ಸಿಲುಕಿದ್ದ ಕೃಷ್ಣೇಗೌಡ ಹಾಗೂ ಸಣ್ಣ ನೀರಾವರಿ ಇಲಾಖೆಯ ನೌಕರ ಅರುಣ್ ಪ್ರಸಾದ್ ಅವರನ್ನು ರಕ್ಷಿಸಿ, ಪ್ರಾಥಮಿಕ ಚಿಕಿತ್ಸೆ ನೀಡಿ, ಆಸ್ಪತ್ರೆಗೆ ದಾಖಲಿಸಲಾಯಿತು.

‘ಪ್ರಾಥಮಿಕ ತನಿಖೆ ಬಳಿಕ ಶಾರ್ಟ್ ಸರ್ಕಿಟ್ನಿಂದ ಬೆಂಕಿ ಕಾಣಿಸಿಕೊಂಡಿರುವ ಸಾಧ್ಯತೆ ಇದೆ. ನಿಖರವಾದ ಕಾರಣ ತಿಳಿಯಲು ತನಿಖೆ ಆರಂಭಿಸಲಾಗಿದೆ’ ಎಂದು ಪೊಲೀಸರು ತಿಳಿಸಿದರು.

ಸ್ಥಳಕ್ಕೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮುಖ್ಯ ಆಯುಕ್ತ ಮಹೇಶ್ವರರಾವ್, ಆಯುಕ್ತ ಕೆ.ಎನ್. ರಮೇಶ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

‘ವಿದ್ಯುತ್ ಅವಘಡದಿಂದ ಎಲೆಕ್ಟ್ರಿಕಲ್ ಡಕ್ಟ್ ಹಾನಿಯಾಗಿದೆ. ಅವಘಡಕ್ಕೆ ನಿಖರ ಕಾರಣ ತಿಳಿಯುವ ಸಂಬಂಧ ತನಿಖೆ ನಡೆಸಿ ವರದಿ ನೀಡಲು ದಕ್ಷಿಣ ನಗರ ಪಾಲಿಕೆ, ಬೆಸ್ಕಾಂ ಹಾಗೂ ಅಗ್ನಿ ಶಾಮಕ ದಳದ ಅಧಿಕಾರಿಗಳ ತಂಡವನ್ನು ರಚಿಸಲಾಗಿದೆ. ಸಾರ್ವಜನಿಕರ ಹಿತದೃಷ್ಟಿಯಿಂದ ಹಾಗೂ ಮುಂಜಾಗ್ರತಾ ಕ್ರಮವಾಗಿ ವಾಣಿಜ್ಯ ಸಂಕೀರ್ಣದ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಲಾಗಿದ್ದು, ಕಟ್ಟಡದಲ್ಲಿನ
ಎಲ್ಲ ಮಳಿಗೆಗಳು ಹಾಗೂ ಕಚೇರಿಗಳನ್ನು ತಾತ್ಕಾಲಿಕವಾಗಿ ಮುಚ್ಚಲಾಗಿದೆ’ ಎಂದು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಧಿಕಾರಿಗಳು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.