ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

28ರಿಂದ ಸಾರ್ವತ್ರಿಕ ಮುಷ್ಕರ: ಜೆಸಿಟಿಯು

ಕಾರ್ಮಿಕರಿಂದ ಎರಡು ದಿನ ಕೆಲಸ ಬಹಿಷ್ಕಾರ
Last Updated 25 ಮಾರ್ಚ್ 2022, 19:31 IST
ಅಕ್ಷರ ಗಾತ್ರ

ಬೆಂಗಳೂರು: ಕಾರ್ಮಿಕ ಕಾನೂನುಗಳ ತಿದ್ದುಪಡಿ ವಿರೋಧಿಸಿ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿಯು (ಜೆಸಿಟಿಯು) ಮಾ.28 ಮತ್ತು 29ರಂದು ಅಖಿಲ ಭಾರತ ಸಾರ್ವತ್ರಿಕ ಮುಷ್ಕರಕ್ಕೆ ಕರೆ ನೀಡಿದೆ. ಕಾರ್ಮಿಕರು ಕಾರ್ಖಾನೆಗಳಲ್ಲಿಎರಡೂ ದಿನ ಕೆಲಸ ಬಹಿಷ್ಕರಿಸಲು ನಿರ್ಧರಿಸಿದ್ದಾರೆ.

ಶುಕ್ರವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಐಟಿಯು ಸಂಘಟನೆಯ ರಾಜ್ಯ ಘಟಕದ ಅಧ್ಯಕ್ಷೆ ಎಸ್.ವರಲಕ್ಷ್ಮಿ,‘28ರಂದು ತಾಲ್ಲೂಕು ಮತ್ತು ಕೈಗಾರಿಕಾ ಪ್ರದೇಶಗಳಲ್ಲಿ ಪ್ರತಿಭಟನೆ ಹಾಗೂ ಗ್ರಾಮೀಣ ಬಂದ್‌ ಇರಲಿದೆ. ಬ್ಯಾಂಕ್‌, ವಿಮೆ, ಆದಾಯ ತೆರಿಗೆ, ಅಂಚೆ ಸೇರಿದಂತೆ ಎಲ್ಲ ರೀತಿಯ ಕೇಂದ್ರ ಸೇವೆಗಳು ಎರಡೂ ದಿನ ಸ್ಥಗಿತಗೊಳ್ಳಲಿವೆ. ಮುಷ್ಕರದ ಭಾಗವಾಗಿ29ರಂದು ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ನಡೆಸಲಿದ್ದೇವೆ’ ಎಂದರು.

‘ಕಾರ್ಮಿಕ ಸಂಹಿತೆಗಳನ್ನು ರದ್ದುಪಡಿಸಿ, ವಿದ್ಯುತ್ ಮಸೂದೆ (ತಿದ್ದುಪಡಿ) ಹಿಂಪಡೆಯಬೇಕು. ಯಾವುದೇ ಕಾರಣಕ್ಕೂಖಾಸಗೀಕರಣಕ್ಕೆ ಅವಕಾಶ ನೀಡಬಾರದು. ರೈತರಿಗೆ ಕನಿಷ್ಠ ಬೆಂಬಲ ಬೆಲೆ ಖಾತ್ರಿಪಡಿಸಬೇಕು. ರಾಷ್ಟ್ರೀಯ ಪಿಂಚಣಿ ಯೋಜನೆ (ಎನ್‌ಪಿಎಸ್) ರದ್ದು ಮಾಡಿ, ಹಳೆ ಪಿಂಚಣಿ ವ್ಯವಸ್ಥೆ ಮತ್ತೆ ಜಾರಿ ಜಾರಿ ಮಾಡಬೇಕು’ ಎಂದು ಒತ್ತಾಯಿಸಿದರು.

ಟಿಯುಸಿಸಿ ಸಂಘಟನೆ ಅಧ್ಯಕ್ಷ ಶಿವಶಂಕರ್,‘ನರೇಗಾಗೆ ಹೆಚ್ಚಿನ ಅನುದಾನ ನೀಡಿ, ಉದ್ಯೋಗ ಖಾತ್ರಿ ಯೋಜನೆಯನ್ನು ನಗರ ಪ್ರದೇಶಗಳಿಗೆ ವಿಸ್ತರಿಸಬೇಕು. ಗುತ್ತಿಗೆ, ಹೊರಗುತ್ತಿಗೆ ಕಾರ್ಮಿಕರಿಗೆ ಜೀವನಯೋಗ್ಯ ವೇತನ ಮತ್ತು ಭದ್ರತೆ ಒದಗಿಸಬೇಕು. ಆಶಾ ಕಾರ್ಯಕರ್ತರಿಗೆ ಕನಿಷ್ಠ ವೇತನ ನೀಡಬೇಕು. ಪೆಟ್ರೋಲಿಯಂ ಉತ್ಪನ್ನಗಳ ಮೇಲಿನ ಕೇಂದ್ರ ಅಬಕಾರಿ ಸುಂಕ ಕಡಿಮೆ ಮಾಡಬೇಕು. ಬೆಲೆ ಏರಿಕೆ ನಿಯಂತ್ರಣಕ್ಕಾಗಿ ಅಗತ್ಯ ಪರಿಹಾರ ಕ್ರಮಗಳನ್ನು ಸರ್ಕಾರ ಘೋಷಿಸಬೇಕು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT