ಬೆಂಗಳೂರು: ಬಿಟಿಎಂ ಲೇಔಟ್ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಪುಡಿರೌಡಿಗಳ ಅಟ್ಟಹಾಸ ಮಿತಿಮೀರಿದೆ ಎಂದು ಜೆಡಿಎಸ್ ಆರೋಪಿಸಿದೆ.

ಕಾಂಗ್ರೆಸ್ನ ರಾಮಲಿಂಗಾರೆಡ್ಡಿ ಅವರು ಪ್ರತಿನಿಧಿಸುವ ಬಿಟಿಎಂ ಲೇಔಟ್ ನಲ್ಲಿ ಇತ್ತೀಚೆಗೆ ಯುವಕನೊಬ್ಬ ಅಂಗಡಿಗೆ ನುಗ್ಗಿ ದಾಂಧಲೆ ನಡೆಸಿ, ಕಲ್ಲು ತೂರಾಟ ಮಾಡಿದ್ದ ಎನ್ನಲಾದ ವಿಡಿಯೊ ಹಂಚಿಕೊಂಡು ಜೆಡಿಎಸ್ ಕಿಡಿಕಾರಿದೆ. ಈ ಕುರಿತು ಎಕ್ಸ್ನಲ್ಲಿ ವಿಡಿಯೊ ಹಂಚಿಕೊಂಡಿದೆ.

ಎತ್ತ ಸಾಗಿದೆ ರಾಜ್ಯದ ಕಾನೂನು ಸುವ್ಯವಸ್ಥೆ ? ಸರ್ವಜನಾಂಗದ ಶಾಂತಿಯ ತೋಟವಾಗಿದ್ದ ಕರ್ನಾಟಕದಲ್ಲಿ ಈಗ ಕೊತ್ವಾಲ್ ಶಿಷ್ಯಂದಿರು ವಿಜೃಂಭಿಸುತ್ತಿದ್ದಾರೆ. ಬೆಂಗಳೂರಿನ ಬಿಟಿಎಂ ಲೇಔಟ್ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಮಿತಿಮೀರಿದೆ ಪುಡಿರೌಡಿಗಳ ಅಟ್ಟಹಾಸ. ಪುಂಡರಿಗೆ ಪೊಲೀಸರು, ಕಾನೂನಿನ ಭಯವೇ ಇಲ್ಲವಾಗಿದೆ. ರಾಜಧಾನಿ ಸೇರಿದಂತೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಪಾತಳಕ್ಕೆ ಕುಸಿದಿದೆ ಎಂದು ಆರೋಪಿಸಿದೆ.

ಸರ್ಕಾರದ ಅರಾಜಕತೆಯಲ್ಲಿ ದಿನೇ ದಿನೇ ಸಾರ್ವಜನಿಕರಿಗೆ ರಕ್ಷಣೆ ಎಂಬುದು ಮರೀಚಿಕೆಯಾಗಿದ್ದು, ಜನರು ಆತಂಕದಲ್ಲಿ ಬದುಕುವಂತಾಗಿದೆ ಎಂದು ಆರೋಪಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.