ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪರಿಷತ್‌ ಚುನಾವಣೆ: ಜೆಡಿಎಸ್‌ ಅಭ್ಯರ್ಥಿಗಳ ಘೋಷಣೆ

Last Updated 1 ಅಕ್ಟೋಬರ್ 2020, 18:28 IST
ಅಕ್ಷರ ಗಾತ್ರ

ಬೆಂಗಳೂರು: ವಿಧಾನ ಪರಿಷತ್‌ನ ಶಿಕ್ಷಕರ ಮತ್ತು ಪದವೀಧರರ ತಲಾ ಎರಡು ಕ್ಷೇತ್ರಗಳಿಗೆ ನಡೆಯುವ ಚುನಾವಣೆಗೆ ಜೆಡಿಎಸ್‌ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಗುರುವಾರ ಪ್ರಕಟಿಸಿದೆ.

ಆಗ್ನೇಯ ಶಿಕ್ಷಕರ ಕ್ಷೇತ್ರಕ್ಕೆ ಪರಿಷತ್‌ನ ಹಾಲಿ ಸದಸ್ಯ ಆರ್‌. ಚೌಡರೆಡ್ಡಿ ತೂಪಲ್ಲಿ ಅವರಿಗೆ ಮತ್ತೆ ಟಿಕೆಟ್‌ ನೀಡಲಾಗಿದೆ. ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ ಬೆಂಗಳೂರು ವಕೀಲರ ಸಂಘದ ಅಧ್ಯಕ್ಷ ಎ.ಪಿ. ರಂಗನಾಥ್, ಪಶ್ಚಿಮ ಪದವೀಧರರ ಕ್ಷೇತ್ರಕ್ಕೆ ಧಾರವಾಡದ ಅಣ್ಣಿಗೇರಿಯ ವಕೀಲ ಶಿವಶಂಕರ್‌ ಕಲ್ಲೂರ್ ಮತ್ತು ಈಶಾನ್ಯ ಪದವೀಧರರ ಕ್ಷೇತ್ರಕ್ಕೆ ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘದ ಮಾಜಿ ಅಧ್ಯಕ್ಷ ತಿಮ್ಮಯ್ಯ ಪುರ್ಲೆ ಅವರಿಗೆ ಜೆಡಿಎಸ್‌ ಟಿಕೆಟ್‌ ಘೋಷಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT