ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಟ್ರೋಲ್ ಮಗಾ’ ಅಡ್ಮಿನ್‌ಗಾಗಿ ಹುಡುಕಾಟ

ಜೆಡಿಎಸ್ ಮುಖಂಡರ ಬಗ್ಗೆ ಅವಹೇಳನಕಾರಿ ಪೋಸ್ಟ್‌ ಆರೋಪ
Last Updated 30 ಮೇ 2019, 4:43 IST
ಅಕ್ಷರ ಗಾತ್ರ

ಬೆಂಗಳೂರು: ಜೆಡಿಎಸ್ ಮುಖಂಡರ ಬಗ್ಗೆ ಅವಹೇಳನಕಾರಿ ಪೋಸ್ಟ್‌ ಪ್ರಕಟಿಸಿದ ಆರೋಪದಡಿ ‘ಟ್ರೋಲ್ ಮಗಾ‘ ಫೇಸ್‌ಬುಕ್ ಪುಟದ ಅಡ್ಮಿನ್ ವಿರುದ್ಧ ಶ್ರೀರಾಮಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

‘ಮುಖಂಡರಾದ ಎಚ್‌.ಡಿ. ದೇವೇಗೌಡ, ಎಚ್‌.ಡಿ.ಕುಮಾರಸ್ವಾಮಿ ಹಾಗೂ ನಿಖಿಲ್ ಕುಮಾರಸ್ವಾಮಿ ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸುವ ಪೋಸ್ಟ್‌ಗಳನ್ನು ‘ಟ್ರೋಲ್‌ ಮಗಾ’ ಪುಟದಲ್ಲಿ ಪ್ರಕಟಿಸಿ ತೇಜೋವಧೆಗೆ ಯತ್ನಿಸಲಾಗಿದೆ’ ಎಂದು ಆರೋಪಿಸಿ ಜೆಡಿಎಸ್ ಕಾನೂನು ಘಟಕದ ಪ್ರಧಾನ ಕಾರ್ಯದರ್ಶಿ ಎಸ್‌.ಪಿ. ಪ್ರದೀಪ್‌ಕುಮಾರ್ ದೂರು ನೀಡಿದ್ದಾರೆ.

ಯುವಕನ ವಿಚಾರಣೆ: ‘ಜಯಕಾಂತ್ ಎಂಬುವರೇ ‘ಟ್ರೋಲ್ ಮಗಾ’ ಪುಟದ ಅಡ್ಮಿನ್ ಎಂಬುದಾಗಿ ದೂರುದಾರರು ಹೇಳಿದ್ದರು. ಜಯಕಾಂತ್ ಅವರನ್ನು ವಿಚಾರಣೆಗೆ ಒಳಪಡಿಸಿದಾಗ, ಅವರು ಅಡ್ಮಿನ್ ಅಲ್ಲವೆಂಬುದು ತಿಳಿಯಿತು’ ಎಂದು ಪೊಲೀಸರು ಹೇಳಿದರು.

‘ಜಯಕಾಂತ್ ಅವರೇ ಅಡ್ಮಿನ್ ಎಂದು ಕೆಲವರು ಸುದ್ದಿ ಹಬ್ಬಿಸುತ್ತಿದ್ದಾರೆ. ಅವರಿಗೆ ಬೆದರಿಕೆ ಕರೆಗಳೂ ಬರುತ್ತಿವೆ. ಆ ಸಂಬಂಧ ರಾಮಮೂರ್ತಿ ಠಾಣೆಗೆ ಇತ್ತೀಚೆಗಷ್ಟೇ ದೂರು ಸಹ ನೀಡಿದ್ದಾರೆ. ಅದರ ದಾಖಲೆಗಳನ್ನು ಪರಿಶೀಲಿಸಲಾಗಿದೆ’ ಎಂದು ಮಾಹಿತಿ ನೀಡಿದರು.

‘ಪುಟದ ಅಡ್ಮಿನ್ ಯಾರು ಎಂಬುದು ಸದ್ಯಕ್ಕೆ ಗೊತ್ತಾಗಿಲ್ಲ. ಆತನಿಗಾಗಿ ಹುಡುಕಾಟ ನಡೆಸುತ್ತಿದ್ದು, ಸೈಬರ್ ಕ್ರೈಂ ಪೊಲೀಸರ ನೆರವು ಪಡೆಯುತ್ತಿದ್ದೇವೆ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT